ಯಾದಗಿರಿ:ಜಿಲ್ಲೆಯ ಹುಣಸಗಿ ತಾಲೂಕಿನ ಬಸವ ಸಾಗರ ಜಲಾಶಯವು ಪ್ರವಾಸಿಗರ ತಾಣವಾಗಿ ಮಾರ್ಪಟ್ಟಿದ್ದು, ಮುಂಜಾನೆಯಿಂದ ಸಂಜೆಯವರೆಗೂ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಜಲಾಶಯಕ್ಕೆ ಭೇಟಿ ನೀಡುತ್ತಿದ್ದಾರೆ.
ತುಂಬಿ ಹರಿಯುತ್ತಿರುವ ಬಸವ ಸಾಗರ ಜಲಾಶಯ ನೋಡಲು ಪ್ರವಾಸಿಗರ ದಂಡು.. - Tourists visit to see the overflowing Basavasagar reservoir
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಸವ ಸಾಗರ ಜಲಾಶಯವು ಪ್ರವಾಸಿಗರ ತಾಣವಾಗಿ ಮಾರ್ಪಟ್ಟಿದ್ದು, ಮುಂಜಾನೆಯಿಂದ ಸಂಜೆಯವರೆಗೂ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಜಲಾಶಯಕ್ಕೆ ಭೇಟಿ ನೀಡುತ್ತಿದ್ದಾರೆ.
ಬಸವ ಸಾಗರ ಜಲಾಶಯದಿಂದ ಕೃಷ್ಣ ನದಿಗೆ 2,90,000 ಕ್ಯೂಸೆಕ್ ನೀರು ಹರಿಸಿದ ಹಿನ್ನೆಲೆ, ಮುಂಜಾನೆಯಿಂದ ಸಂಜೆಯವರೆಗೂ ಪ್ರವಾಸಿಗರು ಜಲಾಶಯಕ್ಕೆ ಭೇಟಿ ನೀಡುತ್ತಿದ್ದಾರೆ. ಬಸವ ಸಾಗರ ಜಲಾಶಯದ 24 ಗೇಟುಗಳ ಪೈಕಿ 21 ಗೇಟುಗಳು ಮುಖಾಂತರ ನೀರು ಹರಿಸಲಾಗಿದ್ದು, ಸಾವಿರಾರು ಪ್ರವಾಸಿಗರು ಕುಟುಂಬಸ್ಥರೊಂದಿಗೆ ಜಲಾಶಯಕ್ಕೆ ಭೇಟಿ ನೀಡಿ ಆನಂದಿಸುತ್ತಿದ್ದಾರೆ. ಬಸವ ಸಾಗರ ಜಲಾಶಯದಿಂದ ಕೃಷ್ಣ ನದಿಗೆ ನೀರು ಹರಿಸಿದ ಹಿನ್ನೆಲೆ, ಸಾವಿರಾರು ಎಕ್ಕರೆ ಜಮೀನು ಜಲಾವೃತ್ತವಾಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.
ಹೀಗಾಗಿ ಜಿಲ್ಲಾಡಳಿತ ಸೂಕ್ತ ಪರಿಶೀಲನೆ ನಡೆಸಿ, ಹಾನಿಗೊಳಗಾದ ಸಂತ್ರಸ್ತ ರೈತರಿಗೆ ಪರಿಹಾರ ಒದಗಿಸಬೇಕು ಹಾಗೂ ಕೃಷ್ಣ ನದಿ ತಟದಲ್ಲಿರುವ ಗ್ರಾಮಸ್ಥರಿಗೆ ಯಾವುದೆ ರೀತಿಯ ತೊಂದರೆ ಆಗದಂತೆ ಮುಂಜಾಗೃತಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕೆಂದು ಪ್ರವಾಸಿಗರು ಆಗ್ರಹಿಸಿದ್ದಾರೆ.