ಸುರಪುರ :ತಾಲೂಕಿನ ದೇವಪುರ ಗ್ರಾಮದ ಬಳಿ ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದ್ದು, ಒಬ್ಬ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ.. ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ - ತಾಲೂಕಿನ ದೇವಪುರ ಗ್ರಾಮ
ಘಟನಾ ಸ್ಥಳಕ್ಕೆ ಸುರಪುರ ಠಾಣೆ ಇನ್ಸ್‌ಪೆಕ್ಟರ್ ಎಸ್ ಎಮ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಸುರಪುರ ನಗರದ ತಾಲೂಕು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ..
ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ
ಎರಡು ಬೈಕ್‌ಗಳು ದೇವಾಪುರ ಗ್ರಾಮದವರದ್ದೇ ಆಗಿದ್ದು, ಅಪಘಾತದಿಂದಾಗಿ ಅಮತೇಶ ಶಿವಪ್ಪ ಕೆಂಬಾವಿ (18 ವರ್ಷ) ದೇವಾಪುರ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಇನ್ನುಳಿದ ಇಬ್ಬರು ಯುವಕರಾದ ಸದ್ದಾಮ್ ಹಾಗೂ ವಿರೇಶ್ ಗಂಭೀರವಾಗಿ ಗಾಯಗೊಂಡಿದ್ದರಿಂದ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಘಟನಾ ಸ್ಥಳಕ್ಕೆ ಸುರಪುರ ಠಾಣೆ ಇನ್ಸ್‌ಪೆಕ್ಟರ್ ಎಸ್ ಎಮ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಸುರಪುರ ನಗರದ ತಾಲೂಕು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.