ಯಾದಗಿರಿ : ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶಾಂತರೆಡ್ಡಿ ದೇಸಾಯಿ ಹಾಗೂ ಉಪಾಧ್ಯಕ್ಷರಾಗಿ ಶರಣಪ್ಪ ಬದ್ದೇಳ್ಳಿ ಅವಿರೋಧವಾಗಿ ಆಯ್ಕೆಯಾದರು.
ನಾಯಕಲ್ ಗ್ರಾಮದ ಪ್ರಾಥಮಿಕ ಕೃಷಿ ಸಹಕಾರಿ ಸಂಘ ಚುನಾವಣೆಯಲ್ಲಿಅವಿರೋಧ ಆಯ್ಕೆ - Cooperative Society Election
ಇಂದು ನಡೆದ ನಾಯ್ಕಲ್ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಉಭಯ ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದರಿಂದ ಚುನಾವಣಾಧಿಕಾರಿ ಶಂಕರ ಗೋಪಾಲ್ ಅವಿರೋಧವಾಗಿ ಅಧ್ಯಕ್ಷರಾಗಿ ಶಾಂತರೆಡ್ಡಿ ದೇಸಾಯಿ ಹಾಗೂ ಉಪಾಧ್ಯಕ್ಷರಾಗಿ ಶರಣಪ್ಪ ಬದ್ದೇಳ್ಳಿ ಆಯ್ಕೆ ಆಗಿದ್ದಾರೆಂದು ಘೋಷಿಸಿದರು..
ಇಂದು ನಡೆದ ಚುನಾವಣೆಯಲ್ಲಿ ಉಭಯ ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದದ್ಧರಿಂದ ಚುನಾವಣಾಧಿಕಾರಿ ಶಂಕರ ಗೋಪಾಲ್, ಅಧ್ಯಕ್ಷರಾಗಿ ಶಾಂತರೆಡ್ಡಿ ದೇಸಾಯಿ ಹಾಗೂ ಉಪಾಧ್ಯಕ್ಷರಾಗಿ ಶರಣಪ್ಪ ಬದ್ದೇಳ್ಳಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆಂದು ಘೋಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ನೂತನ ಅಧ್ಯಕ್ಷ ಶಾಂತರೆಡ್ಡಿ ದೇಸಾಯಿ, ಗ್ರಾಮೀಣ ಪ್ರದೇಶದಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿವೆ. ಎಲ್ಲರ ಸಹಕಾರದಿಂದ ಸರ್ಕಾರದ ಯೋಜನೆಗಳ ಲಾಭ ಗ್ರಾಮದ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು. ಸಭೆಯಲ್ಲಿ ಸಂಘದ ಎಲ್ಲಾ ನಿರ್ದೇಶಕರು ಹಾಜರಿದ್ದರು.