ಸುರಪುರ: ಪಟ್ಟಣದ ಝಂಡದಕೇರಾ ಬಳಿಯ ಈದ್ಗಾ ಮೈದಾನದ ಪಕ್ಕದ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಸುರಪುರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ: ಪೊಲೀಸರಿಂದ ಅಂತ್ಯಸಂಸ್ಕಾರ - ಸುರಪುರಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಸುರಪುರ ಪಟ್ಟಣದ ಹೊರ ವಲಯದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಪೊಲೀಸ್ ಇಲಾಖೆ ಹಾಗೂ ನಗರಸಭೆ ಸಿಬ್ಬಂದಿಯೇ ಶವ ಸಂಸ್ಕಾರ ನಡೆಸಿದ್ದಾರೆ.

ಸುರಪುರಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಮೃತ ವ್ಯಕ್ತಿ ಸುಮಾರು 70 ವರ್ಷ ವಯಸ್ಸಿನವನು ಇರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹದ ಬಳಿ ಪಟ್ಟಣದ ಆಪ್ಟಿಕಲ್ ಒಂದರ ಸಣ್ಣ ಬ್ಯಾಗ್ ಮತ್ತು ನೀರಿನ ಬಾಟಲಿ ಪತ್ತೆಯಾಗಿದೆ. ಬಿಸಿಲ ಬೇಗೆಯಿಂದ ಮರಣ ಹೊಂದಿರಬಹುದೆಂದು ಶಂಕಿಸಲಾಗಿದೆ.
ಎರಡು ದಿನಗಳ ಕಾಲ ಮೃತದೇಹವನ್ನು ನಗರದ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿಟ್ಟು ಸಂಬಂಧಪಟ್ಟವರು ಸಂಪರ್ಕಿಸುವಂತೆ ಸೂಚಿಸಲಾಗಿತ್ತು. ಆದರೆ ಯಾರೂ ಬಾರದಿರುವುದರಿಂದ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ನಗರಸಭೆ ಸಿಬ್ಬಂದಿ ಸೇರಿ ಶವ ಸಂಸ್ಕಾರ ನಡೆಸಿದ್ದಾರೆ. ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.