ಸುರಪುರ (ಯಾದಗಿರಿ): ಪರಿಶಿಷ್ಟ ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿ ಹೆಚ್ಚಿಸಲು ಆಗ್ರಹಿಸಿ ಸುರಪುರ ತಹಶೀಲ್ದಾರ ಕಚೇರಿ ಮುಂದೆ ವಾಲ್ಮೀಕಿ ನಾಯಕ ಮುಖಂಡರು ಒಂದು ದಿನದ ಸಾಂಕೇತಿಕ ಧರಣಿ ನಡೆಸಿದರು.
ವಾಲ್ಮೀಕಿ ನಾಯಕ ಸಮುದಾಯದ ಗುರುಪೀಠದ ವರದಾನೇಶ್ವರ ಸ್ವಾಮೀಜಿ, ನಗರಸಭೆ ಹಾಲಿ-ಮಾಜಿ ಸದಸ್ಯರು ಮತ್ತು ವಿವಿಧ ಸಂಘ ಸಂಸ್ಥೆಗಳ ಮುಖಂಡರು ಧರಣಿಯಲ್ಲಿ ಭಾಗವಹಿಸಿದ್ದರು.
ವಾಲ್ಮೀಕಿ ಸಮುದಾಯದಿಂದ ಸುರಪುರದಲ್ಲಿ ಪ್ರತಿಭಟನೆ ವರದಾನೇಶ್ವರ ಸ್ವಾಮೀಜಿ ಮಾತನಾಡಿ, ವಾಲ್ಮೀಕಿ ನಾಯಕ ಸಮುದಾಯಕ್ಕೆ ಶೇ 7.5ರಷ್ಟು ಮೀಸಲಾತಿ ನೀಡುವಂತೆ ಸರ್ಕಾರಗಳಿಗೆ ಮನವಿ ಮಾಡುತ್ತಿದ್ದರೂ ಸಹ ಸ್ಪಂದಿಸುತ್ತಿಲ್ಲ. ಕೂಡಲೇ ನಮ್ಮ ಬೇಡಿಕೆಯನ್ನು ಈಡೇರಿಸಬೇಕು. ಅಲ್ಲದೆ ನಮ್ಮ ಸಮುದಾಯಕ್ಕೆ ಬೇರೆ ಬೇರೆ ಜಾತಿಯ ಜನಾಂಗದವರು ಎಸ್ಟಿ ಮೀಸಲಾತಿ ಅಡಿ ಸೇರ್ಪಡೆಗೊಳ್ಳಲು ಕೇಳುತ್ತಿದ್ದಾರೆ. ಅವರಿಗೆ ಮೀಸಲಾತಿ ನೀಡಲು ಯಾವುದೇ ಅಭ್ಯಂತರವಿಲ್ಲ. ಆದರೆ ಪರಿಶಿಷ್ಟ ಪಂಗಡಕ್ಕೆ ಬೇರೆ ಯಾವ ಸಮುದಾಯಗಳನ್ನು ಸೇರಿಸಬಾರದೆಂದು ನಾವು ಆಗ್ರಹಿಸುತ್ತೇವೆ ಎಂದರು.
ಬಳಿಕ ಗ್ರೇಡ್-2 ತಹಶೀಲ್ದಾರ್ ಸೂಫಿಯಾ ಸುಲ್ತಾನ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.