ಸುರಪುರ:ಸ್ವಾತಂತ್ರ್ಯ ಹೋರಾಟಗಾರ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರವಿರುವ ಅಂಚೆ ಚೀಟಿ ಹೊರತರುವಂತೆ ಕರ್ನಾಟಕ ನವ ನಿರ್ಮಾಣ ಸೇನೆ ರಾಜ್ಯಾಧ್ಯಕ್ಷ ಹಾಗೂ ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಭೀಮಾಶಂಕರ ಪಾಟೀಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸುರಪುರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಭಾವಚಿತ್ರವಿರುವ ಅಂಚೆ ಚೀಟಿ ಹೊರತರಲು ಒತ್ತಾಯ - Urge to Release New Postage stamp
ಸುರಪುರ ಸಂಸ್ಥಾನದ ಅರಸು ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರವಿರುವ ಅಂಚೆ ಚೀಟಿಯನ್ನು ಹೊರತರಬೇಕೆಂದು ಕರ್ನಾಟಕ ನವ ನಿರ್ಮಾಣ ಸೇನೆ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ್ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಕೇಂದ್ರ ಸರ್ಕಾರ ಅಸ್ಸೋಂನ ಬುಡಕಟ್ಟು ಹೋರಾಟಗಾರ ಬಿರ್ಸಾ ಮುಂಡಾ ಅವರ ಚಿತ್ರವಿರುವ ಅಂಚೆ ಚೀಟಿ ಹೊರತಂದಿದೆ. ಅದೇ ರೀತಿ ಭಾರತದ ಇತಿಹಾಸದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಹಾಗೂ 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಅವಧಿಯಲ್ಲಿ ಮೊದಲು ಧ್ವನಿ ಮೊಳಗಿಸಿದ, ಸುರಪುರ ಸಂಸ್ಥಾನದ ಅರಸು ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರವಿರುವ ಅಂಚೆ ಚೀಟಿಯನ್ನು ಹೊರತರಬೇಕು. ಈ ಮೂಲಕ ಸುರಪುರದ ಇತಿಹಾಸವನ್ನು ದೇಶಕ್ಕೆ ಪರಿಚಯಿಸುವ ಕಾರ್ಯ ಆಗಬೇಕೆಂದು ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಜೊತೆಗೆ ಕಲಬುರಗಿಯ ಕೇಂದ್ರಿಯ ವಿಶ್ವ ವಿದ್ಯಾಲಯದಲ್ಲಿ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಕುರಿತ ಅಧ್ಯಯನ ಪೀಠ ಆರಂಭಿಸಬೇಕೆಂದು ಭೀಮಾಶಂಕರ್ ಮನವಿ ಮಾಡಿದ್ದಾರೆ.