ಯಾದಗಿರಿ :ಪಡಿತರ ಚೀಟಿದಾರರಿಗೆ ನೀಡುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕರಡಕಲ್ ಗ್ರಾಮದಲ್ಲಿ ನಡೆದಿದೆ.
ಅನ್ನಭಾಗ್ಯ ಯೋಜನೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ರೂಪದ ಅಕ್ಕಿ ಕಂಡು ಬಂದಿದೆ ಎಂದು ಗ್ರಾಮಸ್ಥರು ಆರೋಪಿಸಿ, ನ್ಯಾಯ ಬೆಲೆ ಅಂಗಡಿಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೇ ಈ ಅಕ್ಕಿ ಪರಿಶೀಲಿಸಿ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ನ್ಯಾಯ ಬೆಲೆ ಅಂಗಡಿ ವಿರುದ್ಧ ಗ್ರಾಮಸ್ಥರ ಆಕ್ರೋಶ.. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಅಕ್ಕಿಚೀಲ ಪರಿಶೀಲಿಸಿದ್ದಾರೆ. ಇದು ಪ್ಲಾಸ್ಟಿಕ್ ಅಕ್ಕಿಯಲ್ಲ, ವಿಟಮಿನ್ ಡಿ ಅಕ್ಕಿಯಾಗಿದೆ ಎಂದು ಗ್ರಾಮಸ್ಥರ ಮನವೊಲಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ.
ಅಲ್ಲದೆ ಶಾಲೆ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಪೂರೈಕೆಯಾಗಬೇಕಿದ್ದ ಅಕ್ಕಿ ನ್ಯಾಯಬೆಲೆ ಅಂಗಡಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದರು.
ಇದನ್ನೂ ಓದಿ:ಇಬ್ಬರು ಶಾಲಾ ಮಕ್ಕಳಿಗೆ ಕೊರೊನಾ ಸೋಂಕು : ಎರಡು ದಿನ ಈ ಸರ್ಕಾರಿ ಶಾಲೆಗೆ ರಜೆ