ಕರ್ನಾಟಕ

karnataka

ETV Bharat / state

ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಹೋರಾಟದ ಎಚ್ಚರಿಕೆ - health department employees demands

ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸದಿದ್ದರೆ ಮತ್ತೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಯಮೋಜಿ ಎಚ್ಚರಿಸಿದ್ದಾರೆ.

Yadgir
ಯಾದಗಿರಿ

By

Published : Oct 27, 2020, 6:02 PM IST

Updated : Oct 27, 2020, 6:37 PM IST

ಯಾದಗಿರಿ: ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸದಿದ್ದರೆ ಮತ್ತೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಯಮೋಜಿ ಎಚ್ಚರಿಸಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಯಮೋಜಿ ಯಾದಗಿರಿ ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈಗಾಗಲೇ ಕಳೆದ ತಿಂಗಳು ಸಂಘವು ಬೃಹತ್ ಹೋರಾಟ ನಡೆಸಿದೆ. ಈ ಬಗ್ಗೆ ಅಂದಿನ ಆರೋಗ್ಯ ಸಚಿವ ಬಿ.ಶ್ರೀರಾಮುಲು, ಒಂದು ತಿಂಗಳಲ್ಲಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು.

ಈ ಹಿನ್ನೆಲೆ ಸಂಘವು ತಾತ್ಕಾಲಿಕವಾಗಿ ಹೋರಾಟ ಮುಂದೂಡಿತ್ತು. ಈಗ ಆರೋಗ್ಯ ಸಚಿವರು ಬದಲಾಗಿದ್ದು, ಹೊಸ ಸಚಿವರಾದ ಡಾ.ಸುಧಾಕರ್​ ಅವರ ಗಮನಕ್ಕೂ ತರಲಾಗಿದೆ. ನವೆಂಬರ್ 7 ರ ಒಳಗೆ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮತ್ತೆ ಜಿಲ್ಲಾಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ಸಂಘವು ಬೃಹತ ಹೋರಾಟ ಮಾಡುತ್ತೆ. ಆರೋಗ್ಯ ಇಲಾಖೆ ನೌಕರರು ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸರಕಾರ ಕೂಡಲೇ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರಕಾರಕ್ಕೆ ಸಂಘದ ಅಧ್ಯಕ್ಷ ವಿಶ್ವರಾಧ್ಯ ಸುದ್ದಿಗೋಷ್ಠಿ ನಡೆಸಿ ಒತ್ತಾಯ ಮಾಡಿದರು.

Last Updated : Oct 27, 2020, 6:37 PM IST

ABOUT THE AUTHOR

...view details