ಕರ್ನಾಟಕ

karnataka

ETV Bharat / state

ಕೃಷ್ಣಾ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ : ಆತಂಕದಲ್ಲಿ ಜನತೆ - ಯಾದಗಿರಿ ಸುದ್ದಿ

ಜಿಲ್ಲೆಯ ಎರಡು ಪ್ರಮುಖ ನದಿಗಳಾದ ಕೃಷ್ಣಾ ಮತ್ತು ಭೀಮಾ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿ ತೀರದ ಜನರಲ್ಲಿ ಪ್ರವಾಹ ಆತಂಕ ಎದುರಾಗಿದೆ.

Water from the Narayanpur Reservoir to the Krishna River
ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತೆ ಪ್ರವಾಹ ಭೀತಿ

By

Published : Oct 14, 2020, 5:33 PM IST

ಯಾದಗಿರಿ: ಜಿಲ್ಲೆಯ ಕೃಷ್ಣಾ ನದಿ ಪಾತ್ರದ ಜನರಲ್ಲಿ ಈಗ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಸತತವಾಗಿ ಸುರಿಯುತ್ತಿರುವ ಮಹಾ ಮಳೆ ಹಿನ್ನೆಲೆ ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿ ಬಿಡಲಾಗುತ್ತಿದ್ದು, ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ.

ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತೆ ಪ್ರವಾಹ ಭೀತಿ

ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿ ಇರುವ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿ ಒಳಹರಿವು ಹೆಚ್ಚಾಗಿದ್ದರಿಂದ ಅನಿವಾರ್ಯವಾಗಿ ನದಿಗೆ 1 ಲಕ್ಷ 63 ಸಾವಿರ ಕ್ಯೂಸೆಕ್ ಗೂ ಅಧಿಕ ನೀರು ಹೊರಬಿಡಲಾಗಿದೆ. ಒಟ್ಟು 33.313 ಟಿಎಂಸಿ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲೀಗ 31.05 ಟಿಎಂಸಿ ನೀರು ಸಂಗ್ರಹವಾಗಿದೆ.

492.25 ಮೀಟರ್ ನಷ್ಟು ನೀರಿನ ಮಟ್ಟ ಸಾಮರ್ಥ್ಯ ಹೊಂದಿದ ಜಲಾಶಯದಲ್ಲಿ 491.76 ಮೀಟರ್ ನೀರು ಭರ್ತಿ ಆಗಿದೆ. ಜಲಾಶಯದ ಒಳಹರಿವು 1 ಲಕ್ಷ 20 ಸಾವಿರ ಕ್ಯೂಸೆಕ್​ ಇದ್ದು, ಜಲಾಶಯದ 22 ಗೇಟ್ ತೆರೆಯುವ ಮೂಲಕ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ. ಮಹಾ ಮಳೆಗೆ ಇನ್ನೂ ಜಲಾಶಯದ ಒಳ ಹರಿವು ಹೆಚ್ಚಾಗಲಿರುವ ಕಾರಣದಿಂದ, ಸಾಯಂಕಾಲದವರೆಗೆ 1 ಲಕ್ಷ 90 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಕೃಷ್ಣಾ ನದಿಗೆ ಬಿಡುವ ಸಾಧ್ಯತೆಗಳಿವೆ ಎಂದು ಕೆಬಿಜೆಎನ್ಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಎರಡು ಪ್ರಮುಖ ನದಿಗಳಾದ ಕೃಷ್ಣಾ ಮತ್ತು ಭೀಮಾ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿ ತೀರದ ಜನರಲ್ಲಿ ಪ್ರವಾಹ ಆತಂಕ ಎದುರಾಗಿದೆ. ನದಿ ಪಾತ್ರದಲ್ಲಿ ಜನ, ಜಾನುವಾರುಗಳು ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ABOUT THE AUTHOR

...view details