ಕರ್ನಾಟಕ

karnataka

ETV Bharat / state

ಕುಡಿವ ನೀರಿನ ಸಮಸ್ಯೆ... ಗ್ರಾಮಸ್ಥರಿಗೆ ಸಿಇಒ ಅಭಯ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ. ಪ್ರಸ್ತುತ ನಮ್ಮ ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ತಲೆದೊರದ ಹಾಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತ ಗುರುಸಣಗಿ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೂರಿದ್ದು ಅತೀ ಶೀಘ್ರದಲ್ಲಿ ಬಗೆಹರಿಸಲಾಗುವುದು ಎಂದು ಸಿಇಒ ಕವಿತಾ ಮನ್ನಿಕೇರಿ ತಿಳಿಸಿದರು.

By

Published : Apr 10, 2019, 7:48 PM IST

ಜಿಲ್ಲಾ ಪಂಚಾಯತ್ ಸಿಇಓ ಕವಿತಾ ಮನ್ನಿಕೇರಿ

ಯಾದಗಿರಿ:ಜಿಲ್ಲೆಯ ವಡಿಗೇರಾ ತಾಲೂಕಿನ ಗುರಸಣಗಿ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ಉದ್ಭವಿಸಿದ ಹಿನ್ನೆಲೆ ಜಿಲ್ಲಾ ಪಂಚಾಯತ್ ಸಿಇಒ ಕವಿತಾ ಮನ್ನಿಕೇರಿ ಗ್ರಾಮಸ್ಥರಿಗೆ ಅಭಯ ನೀಡಿದ್ದಾರೆ.

ಜಿಲ್ಲೆಯ ವಡಿಗೇರಾ ತಾಲೂಕಿನ ಗುರುಸಣಗಿ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ಕುರಿತು ಈಟಿವಿ ಭಾರತ್ ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಎಚ್ಚೆತ್ತ ಜಿಲ್ಲಾ ಪಂಚಾಯತ್ ಸಿಇಒ ಕವಿತಾ ಮನ್ನಿಕೇರಿ ಗ್ರಾಮಕ್ಕೆ ಕುಡಿಯುವ ನೀರು ತೊಂದರೆಯಾಗದಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಖಡಕ್ಕಾಗಿ ಆದೇಶಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಿಇಓ ಕವಿತಾ ಮನ್ನಿಕೇರಿ

ಜಿಲ್ಲಾಡಳಿತ ಬೇಸಿಗೆ ಕಾಲದಲ್ಲಿ ಕುಡಿವ ನೀರಿನ ಬವಣೆ ತಪ್ಪಿಸಲು ಬಹುಗ್ರಾಮ ಯೋಜನೆಯಡಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಪ್ರಸ್ತುತ ನಮ್ಮ ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ತಲೆದೊರದ ಹಾಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತ ಗುರುಸಣಗಿ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೂರಿದ್ದು ಅತೀ ಶೀಘ್ರದಲ್ಲಿ ಬಗೆಹರಿಸಲಾಗುವುದು ಎಂದು ತಿಳಿಸಿದರು.

ಭೀಮಾ ನದಿಯಿಂದ 1 ಕಿ.ಮೀ ಅಂತರದಲ್ಲಿ ಗುರುಸಣಗಿ ಗ್ರಾಮ ಇರುವುದರಿಂದ ಪೈಪ್​ಲೈನ್​ ಅಳವಡಿಸುವ ಚಿಂತನೆಯಲಿದ್ದೇವೆ. ಪೈಪ್​ಲೈನ್ ಅಳವಡಿಸುವ ಮುಖಾಂತರ ಗುರುಸಣಗಿ ಗ್ರಾಮ ಪಂಚಾಯತ್ ಸುತ್ತಮುತ್ತ ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುತ್ತದೆ. ಈ ವಿಷಯದ ಕುರಿತು ಗ್ರಾಮೀಣ ಕುಡಿವ ನೀರು ಸರಬರಾಜು ಇಲಾಖೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಅತಿ ಶೀಘ್ರದಲ್ಲಿ ಪೈಪ್​ಲೈನ್ ವ್ಯವಸ್ಥೆ ಮಾಡುವ ಮುಖಾಂತರ ಗ್ರಾಮಕ್ಕೆ ನೀರು ಒದಗಿಸಲಾಗುವುದೆಂದು ತಿಳಿಸಿದರು.

ABOUT THE AUTHOR

...view details