ಕರ್ನಾಟಕ

karnataka

By

Published : Oct 18, 2020, 10:11 AM IST

ETV Bharat / state

ಸನ್ನತಿ ಬ್ಯಾರೇಜ್​​ನಿಂದ ನೀರು ಬಿಡುಗಡೆ: ಭೀಮಾ ನದಿ ಪಾತ್ರದ ಜನರಲ್ಲಿ ಮತ್ತೆ ಆತಂಕ ಶುರು

ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದ ನದಿ ಪಾತ್ರದ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ.

Bhima River  banks people Anxiety
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ಪಾತ್ರದ ಜನರಲ್ಲಿ ಮತ್ತೆ ಆತಂಕ

ಯಾದಗಿರಿ: ಸನ್ನತಿ ಬ್ಯಾರೇಜ್​ನಿಂದ ಭೀಮಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಬಿಡಲಾಗುತ್ತಿದ್ದು, ಇದರಿಂದ ನದಿ ಪಾತ್ರದ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ಪಾತ್ರದ ಜನರಲ್ಲಿ ಮತ್ತೆ ಆತಂಕ

ಕಲಬುರಗಿಯ ಚಿತ್ತಾಪುರ ತಾಲೂಕಿನ ಸನ್ನತಿ ಬ್ಯಾರೇಜ್​​ನಿಂದ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಮತ್ತೆ ಭೀಮಾ ನದಿಗೆ 3 ಲಕ್ಷ 10 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. 2.84 ಟಿಎಮ್​​ಸಿ ಸಾಮರ್ಥ್ಯ ಹೊಂದಿದ ಸನ್ನತಿ ಬ್ಯಾರೇಜ್​​ನಲ್ಲಿ 1.2 ಟಿಎಂಸಿ ನೀರು ಭರ್ತಿಯಾಗಿದೆ. ಬ್ಯಾರೇಜ್​​ನ ಒಳಹರಿವು 3 ಲಕ್ಷ 10 ಸಾವಿರದಷ್ಟು ಹೆಚ್ಚಾಗಿದ್ದು, 31 ಗೇಟ್ ಓಪನ್ ಮಾಡುವ ಮೂಲಕ ನದಿಗೆ ನೀರು ಹೊರ ಬಿಡಲಾಗುತ್ತಿದೆ. ಹೀಗಾಗಿ ಮತ್ತೆ ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದ ನದಿ ಪಾತ್ರದ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ.

ಈಗಾಗಲೇ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯ ನದಿ ಪಾತ್ರದ 45 ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ. ಇದರಲ್ಲಿ 12 ಗ್ರಾಮಸ್ಥರನ್ನು ವಿವಿಧ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

ABOUT THE AUTHOR

...view details