ಯಾದಗಿರಿ:ಭೀಮಾ ನದಿ ಪ್ರವಾಹಕ್ಕೆ ತತ್ತರಿಸಿದ್ದ ಜಿಲ್ಲೆಯ ನದಿ ಪಾತ್ರದ ಗ್ರಾಮಸ್ಥರಿಗೆ ಮತ್ತೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸನ್ನತಿ ಬ್ಯಾರೇಜ್‌ನಿಂದ ನೀರು ಬಿಡುಗಡೆ: ಬೆಳೆಗಳು ಜಲಾವೃತ, ಪ್ರವಾಹಕ್ಕೆ ಹೆದರಿ ಮನೆ ಮೇಲ್ಛಾವಣಿ ಏರಿದ ಜನ - yadagiri latest news
ಸನ್ನತಿ ಬ್ಯಾರೇಜ್‌ನಿಂದ ಭೀಮಾ ನದಿಗೆ ಭಾರಿ ಪ್ರಮಾಣದ ನೀರು ಹೊರ ಬಿಡಲಾಗುತ್ತಿದ್ದು, ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸನ್ನತಿ ಬ್ಯಾರೇಜ್‌ನಿಂದ ಭೀಮಾ ನದಿಗೆ ಭಾರಿ ಪ್ರಮಾಣದ ನೀರು ಹೊರ ಬಿಡಲಾಗುತ್ತಿದ್ದು, ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ನದಿ ಪಾತ್ರದ ಮನೆಗಳಿಗೆ ನುಗ್ಗಿದ ನೀರಿನಿಂದ ಜನರು ನಿರಾಶ್ರಿತರಾದರೆ, ಇನ್ನೊಂದೆಡೆ ನದಿ ನೀರಿನಿಂದ ರೈತರು ಬೆಳೆದ ಸಾವಿರಾರು ಎಕರೆ ಜಮೀನು ಜಲಾವೃತವಾಗಿದೆ. ಯಾದಗಿರಿ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಹೆಚ್ಚಾಗುತ್ತಿರುವ ನೀರಿನಿಂದಾಗಿ ಗ್ರಾಮದ ಸುಮಾರು 150ಕ್ಕೂ ಹೆಚ್ಚು ಮನೆ ಮುಳುಗಡೆಯಾಗಿದ್ದು, ಅಪಾರ ಪ್ರಮಾಣದ ದವಸ-ಧಾನ್ಯಗಳು ನೀರು ಪಾಲಾಗಿವೆ. ಮನೆಗಳು ಜಲಾವೃತವಾದ ಹಿನ್ನೆಲೆ ಸುಮಾರು 10 ಕುಟುಂಬಸ್ಥರು ಮನೆಯ ಮೇಲ್ಛಾವಣೆ ಏರಿ ಕುಳಿತಿದ್ದಾರೆ. ಜೊತೆಗೆ ಸಂತ್ರಸ್ತರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.
ಯಾದಗಿರಿ, ವಡಗೇರಾ ಹಾಗೂ ಶಹಪುರ ತಾಲೂಕಿನ ಭೀಮಾ ನದಿ ದಡದಲ್ಲಿ ರೈತರು ಬೆಳೆದ ಹತ್ತಿ, ತೊಗರಿ ಸೇರಿದಂತೆ ಕಟಾವಿಗೆ ಬಂದ ಭತ್ತ ಸಂಪೂರ್ಣ ಹಾನಿಗೀಡಾಗಿದ್ದು, ಕೂಡಲೇ ಸರ್ಕಾರ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಸಂತ್ರಸ್ತರು ಒತ್ತಾಯಿಸಿದ್ದಾರೆ.