ಯಾದಗಿರಿ :5 ತಿಂಗಳ ಮಗುವಿನ ಜತೆಗೇ ಮಹಿಳಾ ಕಾನ್ಸ್ಸ್ಟೇಬಲ್ವೊಬ್ಬರು (woman constable attend duty with her baby) ಕರ್ತವ್ಯಕ್ಕೆ ಹಾಜರಾದ ಘಟನೆ ನಗರದಲ್ಲಿ ನಡೆದಿದೆ.
ನಗರದಲ್ಲಿ ಶುಕ್ರವಾರ ಬಿಜೆಪಿ ವತಿಯಿಂದ ನಡೆದ ಜನಸ್ವರಾಜ್ ಯಾತ್ರೆಗೆ (Jan Swaraj Yatra in yadagiri)ಗೆ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು.
5 ತಿಂಗಳ ಮಗುವಿನ ಜತೆಗೇ ಕರ್ತವ್ಯಕ್ಕೆ ಹಾಜರಾದ ಮಹಿಳಾ ಕಾನ್ಸ್ಟೇಬಲ್ ಈ ವೇಳೆ ಕರ್ತವ್ಯಕ್ಕೆ ಹಾಜರಾದ ಮಹಿಳಾ ಕಾನ್ಸ್ಟೇಬಲ್ವೊಬ್ಬರು 5 ತಿಂಗಳ ಮಗು(5 month old baby)ವನ್ನು ಜೊತೆಯಲ್ಲಿ ಕರೆ ತಂದಿದ್ದರು. ಇವರು ವಡಗೇರಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಬಿಜೆಪಿಯ ಜನಸ್ವರಾಜ್ ಯಾತ್ರೆಗೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಚಾಲನೆ ನೀಡಿದರು. ಈ ಸಮಯದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಕೇಂದ್ರ ಸಚಿವ ಭಗವಂತ ಖೂಬಾ, ವಸತಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಸೇರಿ ಯಾದಗಿರಿಯ ಬಿಜೆಪಿ ಮುಖಂಡರು, ಸ್ಥಳೀಯ ಶಾಸಕರು ಇದ್ದರು.
ಓದಿ:ಶತಮಾನೋತ್ಸವ ಸಂಭ್ರಮದಲ್ಲಿ ಪಾರಂಪರಿಕ ಲಲಿತ ಮಹಲ್ ಹೋಟೆಲ್: ಇಲ್ಲಿದೆ ಭವ್ಯ ಅರಮನೆಯ ಇತಿಹಾಸ, ವೈಶಿಷ್ಟ್ಯತೆ