ಯಾದಗಿರಿ: ತಾಲೂಕಿನ ಹೋತಪೇಟ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 200ಕ್ಕೂ ಜನರು ಅಸ್ವಸ್ಥಗೊಂಡು ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಿರಿಯ ಅಭಿಯಂತರನನ್ನು ಜಿಪಂ ಸಿಇಓ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಹೋತಪೇಟ್ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಮಾಡಲಾಗಿದೆ. ಕಿರಿಯ ಅಭಿಯಂತರ(ಜೆಇಇ) ನೇರ ಹೊಣೆಗಾರರಾಗಿದ್ದಾರೆ. ಅಲ್ಲದೆ ಗ್ರಾಮದಲ್ಲಿ ಕುಡಿಯುವ ನೀರಿನ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಪಿಡಿಓ ಕರ್ತವ್ಯಲೋಪ ಎಸಗಿದ್ದಾರೆ. ಹೀಗಾಗಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ತಾಪಂ ಇಓ ಸೋಮಶೇಖರ ಬಿರಾದಾರ್ ಮಾಹಿತಿ ನೀಡಿದ್ದಾರೆ.