ಯಾದಗಿರಿ: ಜಿಲ್ಲೆಯಲ್ಲಿ ಉಂಟಾದ ಪ್ರವಾಹಕ್ಕೆ ಹಲವು ಗ್ರಾಮಗಳು ಜಲಾವೃತವಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದಿಂದ 3,90,797 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿಸಿದ ಹಿನ್ನೆಲೆ ಜಿಲ್ಲೆಯಾದ್ಯಂತ ನದಿ ಪಾತ್ರದ ಗ್ರಾಮಗಳು ಜಲಾವೃತವಾಗಿವೆ.

ಜೊತೆಗೆ ಆಲಮಟ್ಟಿ ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಹಿನ್ನೆಲೆ ನಾಲ್ಕು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಹರಿಸಲಾಗಿದೆ. ಇದರಿಂದಾಗಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಶೆಳ್ಳಗಿ ಗ್ರಾಮ ಕೃಷ್ಣಾ ನದಿಯ ಪ್ರವಾಹದಿಂದ ಮುಳುಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಸ್ಥಳಕ್ಕೆ ಭೇಟಿ ನೀಡಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರವಾಗುವಂತೆ ಜನರ ಮನವೊಲಿಸಿದ್ದಾರೆ.
ಸಹಾಯಕ ಆಯುಕ್ತರ ಮನವಿಗೆ ಒಪ್ಪಿದ ಗ್ರಾಮಸ್ಥರು ಸುರಪೂರ ಎಪಿಎಂಸಿ ಆವರಣಕ್ಕೆ ಸ್ಥಳಾಂತರವಾಗಿದ್ದಾರೆ. ನಿರಾಶ್ರಿತ ಜನರಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಎಪಿಎಂಸಿ ಆವರಣದಲ್ಲಿ ಮಾಡಲಾಗಿದೆ.