ಯಾದಗಿರಿ: ರಾಜ್ಯ ಸರ್ಕಾರ ಜಾರಿಗೊಳಿಸಲು ಹೊರಟಿರುವ ಕರ್ನಾಟಕ ಭೂಸುಧಾರಣಾ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನೆ ನಡಸಿದ ಪ್ರತಿಭಟನಾಕಾರರು, ಕೂಡಲೆ ರಾಜ್ಯ ಸರ್ಕಾರ ಹೊಸದಾಗಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಭೂಸುಧಾರಣಾ ಕಾಯ್ದೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಯಾದಗಿರಿ: ಭೂಸುಧಾರಣಾ ಕಾಯ್ದೆ ವಿರೋಧಿಸಿ ರೈತ ಸಂಘ ಪ್ರತಿಭಟನೆ ರೈತ ವಿರೋಧಿ ಕಾಯ್ದೆಯ ಮೂಲಕ ಸರ್ಕಾರ ಬಂಡವಾಳ ಶಾಹಿಗಳಿಗೆ ಮಣೆ ಹಾಕಲು ಹುನ್ನಾರ ನಡೆಸುತ್ತಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಈ ಕಾಯ್ದೆಯಿಂದ ಇಡೀ ಭೂಮಿ ಉಳ್ಳವರ ಪಾಲಾಗಿ ರೈತಾಪಿ ವರ್ಗ ಬೀದಿ ಪಾಲಾಗಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ಯಾವುದೇ ಕಾರಣಕ್ಕೂ ಈ ಮಸೂದೆಗೆ ಅನುಮೋದನೆಯನ್ನು ನೀಡಬಾರದು ಎಂದು ಒತ್ತಾಯಿಸಿದರು.
ಒಂದು ವೇಳೆ ಸರ್ಕಾರ ಈ ಕಾಯ್ದೆಯನ್ನು ಜಾರಿಗೊಳಿಸಿದ್ದೇ ಆದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಕರ್ನಾಟಕ ರಾಜ್ಯ ರೈತ ಸಂಘದಿಂದ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.