ಕರ್ನಾಟಕ

karnataka

ETV Bharat / state

ಯಾದಗಿರಿ: ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ - Yadagiri news

ಯಾದಗಿರಿಯ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸ್ಮೈಲ್ ಪೌಂಡೇಷನ್‍ನ ಸಂಯುಕ್ತಾಶ್ರಯದಲ್ಲಿ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ನಿಮಿತ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಗಾಂಧಿಜೀ, ಲಾಲ್ ಬಹದ್ದೂರ್ ಶಾಸ್ರ್ತೀ ಅವರ ಜಯಂತಿ ಆಚರಣೆ
ಗಾಂಧಿಜೀ, ಲಾಲ್ ಬಹದ್ದೂರ್ ಶಾಸ್ರ್ತೀ ಅವರ ಜಯಂತಿ ಆಚರಣೆ

By

Published : Oct 2, 2020, 9:52 PM IST

ಯಾದಗಿರಿ:ಕೊರೊನಾ ಸೋಂಕು ನಿಯಂತ್ರಿಸಲು ಇಲ್ಲಿಯವರೆಗೆ ಯಾವುದೇ ಔಷಧ ಕಂಡು ಹಿಡಿಯದ ಕಾರಣ, ಸಾರ್ವಜನಿಕರು ಮಾಸ್ಕ್ ಧರಿಸುವುದು, ಗುಂಪುಗೂಡದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದೇ ಸೂಕ್ತ ಪರಿಹಾರವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಹೇಳಿದ್ದಾರೆ.

ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸ್ಮೈಲ್ ಪೌಂಡೇಷನ್‍ನ ಸಂಯುಕ್ತಾಶ್ರಯದಲ್ಲಿ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿ ಅವರು ಮಾತನಾಡಿದರು. ಮಾಸ್ಕ್ ಹಾಕಿಕೊಳ್ಳದೇ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಲಾಗುವುದು. ಹಾಗಾಗಿ ಈ ಬಗ್ಗೆ ನಗರಸಭೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸಬೇಕು ಎಂದರು.

ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ

ಕೋವಿಡ್ ಸೋಂಕಿನ ಅಪಾಯದ ಕುರಿತು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಿ, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕರು ಕಿರಾಣಿ ಅಂಗಡಿಗಳಲ್ಲಿ ದಿನಸಿ ವಸ್ತುಗಳನ್ನು ಖರೀದಿಸುವಾಗ ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸದೇ ವ್ಯಕ್ತಿಯು ಎರಡು ಮೂರು ಬಾರಿ ಸಿಕ್ಕಿಕೊಂಡರೆ ಅಂತಹವರ ವಿರುದ್ಧ ಪ್ರಕರಣ ಕೂಡ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ABOUT THE AUTHOR

...view details