ಯಾದಗಿರಿ:ಕೊರೊನಾ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಯಾದಗಿರಿ ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಪ್ರತಿ ಒಂದು ಮಿಲಿಯನ್ ಜನಸಂಖ್ಯೆಗಳ ಪೈಕಿ 7,297 ಜನರಿಗೆ ಕೋವಿಡ್ ಟೆಸ್ಟ್ಗಳನ್ನು ಮಾಡಲಾಗಿದ್ದು, ಇದು ರಾಜ್ಯದಲ್ಲಿಯೇ ಅತೀ ಹೆಚ್ಚು ಟೆಸ್ಟ್ಗಳನ್ನು ಕೈಗೊಂಡ ಜಿಲ್ಲೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಮಾಹಿತಿ ತಿಳಿಸಿದ್ದಾರೆ.
ಜ್ವರದ ಲಕ್ಷಣ ಹಾಗೂ ತೀವ್ರ ಉಸಿರಾಟದ ಸೋಂಕಿನಂತಹ (ಐಎಲ್ಐ, ಸ್ಯಾರಿ) ಲಕ್ಷಣಗಳನ್ನು ಹೊಂದಿರುವ ಸಾರ್ವಜನಿಕರು ಕಡ್ಡಾಯವಾಗಿ ಆರೋಗ್ಯ ತಂಡವನ್ನು ಸಂಪರ್ಕಿಸಿ ಸ್ವಾಬ್ ಪರೀಕ್ಷೆಯನ್ನು ಮಾಡಿಸಿಕೊಳ್ಳತಕ್ಕದ್ದು.