ಯಾದಗಿರಿ: ಶಿಕ್ಷಣ ಇಲಾಖೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಶಿಕ್ಷಣ ಸಚಿವರ ರಾಜೀನಾಮೆ ಆಗ್ರಹಿಸಿ ಯಾದಗಿರಿಯಲ್ಲಿ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ಗೆ ಅವಮಾನ ಆರೋಪ: ದಲಿತ ಸಂಘಟನೆಗಳಿಂದ ಪ್ರತಿಭಟನೆ - ಶಿಕ್ಷಣ ಇಲಾಖೆ ಹೇಳಿಕೆ ಖಂಡಿಸಿ ಯಾದಗಿರಿ ದಲಿತ ಸಂಘಟನೆಗಳ ಪ್ರತಿಭಟನೆ ಸುದ್ದಿ
ಶಿಕ್ಷಣ ಇಲಾಖೆಯ ಹೇಳಿಕೆಯನ್ನು ಮರೆಮಾಚಲು ಶಿಕ್ಷಣ ಸಚಿವರು ಯತ್ನಿಸಿದ್ದಾರೆ ಎಂದು ಅರೋಪಿಸಿ ಯಾದಗಿರಿಯಲ್ಲಿ ವಿವಿಧ ದಲಿತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ರು.
ಶಿಕ್ಷಣ ಇಲಾಖೆಯ ಹೇಳಿಕೆ ಖಂಡಿಸಿ ವಿವಿಧ ಇಲಾಖೆಗಳಿಂದ ಪ್ರತಿಭಟನೆ
ನಗರದ ಸುಭಾಷ್ ವೃತ್ತದಲ್ಲಿ ವಿವಿಧ ದಲಿತರ ಸಂಘಟನೆ ಕಾರ್ಯಕರ್ತರು ಶಿಕ್ಷಣ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅರ್ಧಗಂಟೆಗೂ ಹೆಚ್ಚು ಕಾಲ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.
ಜಿಲ್ಲೆಯ ಶಹಾಪೂರ ತಾಲೂಕಿನ ಹತ್ತಿಗುಡೂರು ಕ್ರಾಸ್ ಬಳಿ ಕೂಡ, ದಲಿತ ಸಂಘಟನೆ ಸದಸ್ಯರು ಧರಣಿ ಸತ್ಯಾಗ್ರಹ ನಡೆಸಿದರು. ಸಂವಿಧಾನ ವಿರೋಧಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.