ಕರ್ನಾಟಕ

karnataka

ETV Bharat / state

ಯಾದಗಿರಿಯಲ್ಲಿ ಗ್ರಾಮಗಳು ಜಲಾವೃತ: ಸುರಕ್ಷಿತ ಸ್ಥಳಗಳಿಗೆ ಜನರ ಸ್ಥಳಾಂತರ - etv Bharat

ಯಾದಗಿರಿ ಜಿಲ್ಲೆಯ ಬಸವ ಸಾಗರ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಕ್ಕೆ ಬಿಟ್ಟ ಹಿನ್ನೆಲೆ ಗ್ರಾಮಗಳು ಜಲಾವೃತವಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ವಿವಿಧೆಡೆ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ.

ಯಾದಗಿರಿ: ಗ್ರಾಮಗಳಿಗೆ ನುಗ್ಗಿದ ಜಲಾಶಯದ ನೀರು, ಸುರಕ್ಷಿತ ಸ್ಥಳಗಳಿಗೆ ಜನರ ಸ್ಥಳಾಂತರ

By

Published : Aug 8, 2019, 9:07 AM IST

Updated : Aug 8, 2019, 1:11 PM IST

ಯಾದಗಿರಿ: ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಟ್ಟ ಹಿನ್ನೆಲೆ ಜಿಲ್ಲೆಯ ಹಲವು ಗ್ರಾಮಗಳು ಜಲಾವೃತವಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಜಿಲ್ಲೆಯ ಹುಣಸಗಿ ತಾಲೂಕು ನಾರಾಯಣಪುರ ಗ್ರಾಮದ ಬಸವ ಸಾಗರ ಜಲಾಶಯದ ಒಳಹರಿವು ಹೆಚ್ಚಾದ ಹಿನ್ನೆಲೆ ಕೃಷ್ಣ ಭಾಗ್ಯ ಜಲ ನಿಗಮ‌ ಅಧಿಕಾರಿಗಳು 4,51,791 ಕ್ಯೂಸೆಕ್ ನೀರು ಹೊರ ಬಿಟ್ಟಿದ್ದಾರೆ. ಈ ಹಿನ್ನೆಲೆ ನದಿ ಪಾತ್ರದ ಜಮೀನುಗಳು ಹಾಗೂ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿವೆ.

ಯಾದಗಿರಿಯಲ್ಲಿ ಗ್ರಾಮಗಳು ಜಲಾವೃತ: ಸುರಕ್ಷಿತ ಸ್ಥಳಗಳಿಗೆ ಜನರ ಸ್ಥಳಾಂತರ

ಹೀಗಾಗಿ ಜಿಲ್ಲಾಡಳಿತದ ವತಿಯಿಂದ ಸುರಪುರ ವಿಧಾನಸಭಾ ಕ್ಷೇತ್ರದ ಶೆಳ್ಳಗಿ ಹಾಗೂ ಶಹಾಪುರ ತಾಲೂಕಿನ ಕೊಳ್ಳೂರ, ಗೌಡಗೇರಾ, ಹೆಮ್ಮಡಗಿ, ಸೂಗರು ಗ್ರಾಮಸ್ಥರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

ಪರಿಹಾರ ಕೇಂದ್ರಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಏರ್ಪಡಿಸಲಾಗಿದೆ.

Last Updated : Aug 8, 2019, 1:11 PM IST

ABOUT THE AUTHOR

...view details