ಕರ್ನಾಟಕ

karnataka

ETV Bharat / state

ಯಾದಗಿರಿ: ಹಳೇ ಪ್ರೇಮಿಗಳಿಬ್ಬರು ಆತ್ಮಹತ್ಯೆ - Two old lovers die after consuming sterile

ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ ಪ್ರೇಮಿಗಳ ಮದುವೆಗೆ ಪೋಷಕರ ನಿರಾಕರಣೆ - ಎರಡು ವರ್ಷಗಳ ಹಿಂದೆ ಬೇರ್ಪಟ್ಟಿದ್ದ ಜೋಡಿ - ಹಬ್ಬಕ್ಕೆಂದು ಗೃಹಿಣಿ ತವರಿಗೆ ಬಂದಿದ್ದ ಸಂದರ್ಭದಲ್ಲಿ ಹಳೇ ಪ್ರೇಮಿಗಳಿಬ್ಬರು ಆತ್ಮಹತ್ಯೆ

yadagiri-two-old-lovers-die-after-consuming-sterile
ಯಾದಗಿರಿ: ಹಳೇ ಪ್ರೇಮಿಗಳಿಬ್ಬರು ಕ್ರಿಮಿನಾಶಕ ಸೇವಿಸಿ ಸಾವು

By

Published : Feb 18, 2023, 9:01 PM IST

ಯಾದಗಿರಿ :ಹಳೇ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದ ಹೊರ ವಲಯದ ಜಮೀನೊಂದರಲ್ಲಿ ನಡೆದಿದೆ. ಮೃತರನ್ನು ವಿಶ್ವರಾಧ್ಯ ಯಮನಪ್ಪ (23 ವರ್ಷ) ಅವಿವಾಹಿತ, ಮತ್ತು ಸುವರ್ಣ (24 ವರ್ಷ) ವಿವಾಹಿತ ಮಹಿಳೆ ಎಂದು ತಿಳಿದು ಬಂದಿದೆ.

ಎರಡು ವರ್ಷಗಳ ಹಿಂದೆ ಯುವತಿಗೆ ಬೇರೆಯವರೊಂದಿಗೆ ಮದುವೆ.. ವಿಶ್ವರಾಧ್ಯ ಹಾಗೂ ಸುವರ್ಣ ಇಬ್ಬರು ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಮದುವೆಗೆ ಪೋಷಕರು ನಿರಾಕರಿಸಿ, ಸುವರ್ಣಳನ್ನು ಎರಡು ವರ್ಷಗಳ ಹಿಂದೆ ಯಾದಗಿರಿ ತಾಲೂಕಿನ ಗೋಡಿಹಾಳ ಗ್ರಾಮದ ವ್ಯಕ್ತಿಯೊಂದಿಗೆ ಮದುವೆ ಮಾಡಿಕೊಟ್ಟಿದ್ದರು. ಮದುವೆಯಾದ ನಂತರ ನವದಂಪತಿ ಬೆಂಗಳೂರಿನಲ್ಲಿ ಜೀವನ ಸಾಗಿಸುತ್ತಿದ್ದರು. ಹಬ್ಬಕ್ಕೆಂದು ತವರಿಗೆ ಬಂದಾಗ ಸುವರ್ಣ ಮತ್ತು ಹಳೇ ಪ್ರೇಮಿ ವಿಶ್ವರಾಧ್ಯ ಶನಿವಾರದಂದು ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಸಾವಿಗೆ ಶರಣಾಗಿದ್ದಾರೆ.

ಮೃತರ ಶವವನ್ನು ಮರಣೋತ್ತರ ಪರೀಕ್ಷೆಗೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಭೀಮರಾಯನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಆ್ಯಸಿಡ್​ ದಾಳಿ :ಪ್ರೀತಿ ನಿರಾಕರಿಸಿದ್ದಕ್ಕೆ ವ್ಯಕ್ತಿಯೊರ್ವ ವಿದ್ಯಾರ್ಥಿನಿ ಮೇಲೆ ಆ್ಯಸಿಡ್​ ದಾಳಿ ನಡೆಸಿ ಅಮಾನಿವೀಯ ಕೃತ್ಯ ಎಸಗಿದ ಪ್ರಕರಣ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ನಾರಾಯಣಪ್ಪ ಕೆರೆ ಬಳಿ ಶುಕ್ರವಾರ ನಡೆದಿತ್ತು. ಆ್ಯಸಿಡ್​ ದಾಳಿಯಿಂದ ಬಾಲಕಿಯ ಎಡ ಕಣ್ಣಿಗೆ ತೀವ್ರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.

ದಾಳಿ ಮಾಡಿದವನು ತನ್ನನ್ನು ಪ್ರೀತಿಸುವಂತೆ ಅಪ್ರಾಪ್ತೆಗೆ ಒತ್ತಾಯಿಸಿದ್ದು, ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಆ್ಯಸಿಡ್​ ಎರಚಿದ್ದಾನೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಕನಕಪುರ ಟೌನ್​ ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಸುಮಂತ್​ (22) ಎಂದು ತಿಳಿದು ಬಂದಿದ್ದು, ಕಾರ್​ ಮೆಕಾನಿಕ್​ ಆಗಿ ಕೆಲಸ ಮಾಡುತ್ತಿದ್ದ ಎಂಬುದು ಪೊಲೀಸರ ವಿಚಾರಣೆ ವೇಳೆ ಗೊತ್ತಾಗಿದೆ.

ಪಿಎಸ್​ಐ ವಿರುದ್ಧ ಅತ್ಯಾಚಾರ ಆರೋಪ : ಬೆಳಗಾವಿ ನಗರದ ಪಿಎಸ್​ಐ ಅಧಿಕಾರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬರು ವೈರ್​ಲೆಸ್​ ಠಾಣೆಯ ಪಿಎಸ್​ಐ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಗುರುವಾರ ನಗರದ ಮಹಿಳಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನನ್ನೇ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿರುವ ಪಿಎಸ್​ಐ ಲಾಲ್​ಸಾಬ್​ ಎಂಬುವವರು ಇದೇ ಫೆಬ್ರವರಿ 10ರಂದು ಬೇರೆ ಯುವತಿಯೊಂದಿಗೆ ಮದುವೆಯಾಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯು ಮಹಿಳಾ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದನ್ನು ಓದಿ :ನಿಕ್ಕಿ ಯಾದವ್​​ ಹತ್ಯೆಗೆ ಬಿಗ್​ ಟ್ವಿಸ್ಟ್​: ಲಿವ್​ ಇನ್ ಅಲ್ಲ, ವಿವಾಹಿತ ದಂಪತಿ.. ತಂದೆಗೆ ಗೊತ್ತಿತ್ತು ಮಗನ ಕೃತ್ಯ!

ABOUT THE AUTHOR

...view details