ಯಾದಗಿರಿ:ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಆಲಿಕಲ್ಲು ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಭೇಟಿ ನೀಡಿ ಪರಿಶೀಲಿಸಿದರು.
ಯಾದಗಿರಿ: ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ - ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಆಲಿಕಲ್ಲು ಮಳೆ
ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಆಲಿಕಲ್ಲು ಮಳೆಯಿಂದ ಬೇಸಿಗೆ ಹಂಗಾಮಿನಲ್ಲಿ ಬೆಳೆಯಲಾದ ಭತ್ತ ಮತ್ತು ಸಜ್ಜೆ ಬೆಳೆಗಳು ಹಾನಿಯಾಗಿದ್ದವು. ಬೆಳೆಗಳು ಹಾನಿಯಾದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
![ಯಾದಗಿರಿ: ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ](https://etvbharatimages.akamaized.net/etvbharat/prod-images/768-512-6781734-326-6781734-1586800031065.jpg)
ಕಳೆದ ಏಪ್ರಿಲ್ 7ರಂದು ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಆಲಿಕಲ್ಲು ಮಳೆಯಿಂದ ಬೇಸಿಗೆ ಹಂಗಾಮಿನಲ್ಲಿ ಬೆಳೆಯಲಾದ ಭತ್ತ ಮತ್ತು ಸಜ್ಜೆ ಬೆಳೆಗಳು ಹಾನಿಯಾಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಹಾಪುರ ಮತ್ತು ವಡಗೇರಾ ತಾಲೂಕಿನ ಐಕೂರ್, ಅನಕಸೂಗೂರು, ಕುರಿಹಾಳ ಮತ್ತು ತುಮಕೂರು ಗ್ರಾಮಗಳಲ್ಲಿ ಬೆಳೆಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ, ರೈತರು ಹಾಗೂ ಅಧಿಕಾರಿಗಳಿಂದ ಹಾನಿಯಾದ ಬಗ್ಗೆ ಮಾಹಿತಿ ಪಡೆದರು.
ಕೃಷಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿ ತಕ್ಷಣ ವರದಿ ಸಲ್ಲಿಸಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸುರೇಶ ಅಂಕಲಗಿ ಮತ್ತು ಶಹಾಪುರ ಸಹಾಯಕ ಕೃಷಿ ನಿರ್ದೇಶಕ ಗೌತಮ ಹಾಜರಿದ್ದರು.
TAGGED:
Yadgir