ಯಾದಗಿರಿ:ಜಿಲ್ಲೆಯಲ್ಲಿಂದು ಹೊಸದಾಗಿ 73 ಜನರಿಗೆ ಕೊರೊನಾ ಸೋಂಕು ಧೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,398ಕ್ಕೆ ಏರಿಕೆಯಾಗಿದೆ.
ಯಾದಗಿರಿಯಲ್ಲಿಂದು 73 ಜನರಿಗೆ ಸೋಂಕು; 9,398 ಕ್ಕೇರಿದ ಸೋಂಕಿತರ ಸಂಖ್ಯೆ - ಕೋವಿಡ್ ಸೋಂಕು
ಯಾದಗಿರಿಯಲ್ಲಿಂದು ಹೊಸದಾಗಿ 73 ಜನರಿಗೆ ಕೊರೊನಾ ಸೋಂಕು ಧೃಢಪಟ್ಟಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ.
Yadgir
ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 54 ಜನ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದು, ಇದುವರೆಗೆ 8,306 ಮಂದಿ ಗುಣಮುಖರಾಗಿದ್ದಾರೆ. ಕೊರೊನಾ ಸೋಂಕಿಗೆ ಇಂದು ಒಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಇದೀಗ 57ಕ್ಕೆ ಏರಿದೆ.
ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 1,035 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.