ಯಾದಗಿರಿ:ನಿಜ ಶರಣ ಅಂಬಿಗರ ಚೌಡಯ್ಯನವರು ನೇರ ನುಡಿಯವರಾಗಿದ್ದರು. ಹೀಗಾಗಿಯೇ ಅವರಿಗೆ ನಿಜ ಶರಣ ಅಂತಾ ಬಿರುದು ಬಂದಿದೆ ಎಂದು ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಹೇಳಿದರು.
ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ - ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ'
ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಅಡಿಟೋರಿಯಂನಲ್ಲಿ ನಡೆದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ.
ನಗರದ ಜಿಲ್ಲಾಡಳಿತ ಭವನದ ಅಡಿಟೋರಿಯಂನಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಹಿಂದುಳಿದ ವರ್ಗಗಳ ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂಯುಕ್ತಾಶ್ರಯದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಬಳಿಕ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಮಾತನಾಡಿ, ಅಂಬಿಗರ ಚೌಡಯ್ಯ ಬಸವಣ್ಣನವರ ಬೆನ್ನುಲುಬಾಗಿದ್ದರು. ಇಂತಹ ಮಹಾನೀಯ ನಿಜ ಶರಣರ ವಚನಗಳು, ತತ್ವಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ. ರಜಪೂತ ಮಾತನಾಡಿ, 12ನೇ ಶತಮಾನದ ಅನೇಕ ಶರಣರು ತಮ್ಮ ವಚನಗಳ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದ್ದಾರೆ. ಈ ಎಲ್ಲಾ ಶರಣರ ವಚನಗಳಲ್ಲಿ ಹಲವನ್ನು ನೇರವಾಗಿ, ದಿಟ್ಟವಾಗಿ ವಚನಗಳ ಮೂಲಕವೇ ಉತ್ತರಿಸುವ ಸರಳರಲ್ಲಿ ಅತಿ ಸರಳರು ನಿಜ ಶರಣ ಅಂಬಿಗರ ಚೌಡಯ್ಯ ಎಂದು ಹೇಳಿದರು.