ಕರ್ನಾಟಕ

karnataka

ETV Bharat / state

ಕೊರೊನಾ ರೋಗಿಯ ಅಂತ್ಯಸಂಸ್ಕಾರದಲ್ಲಿ ನಿರ್ಲಕ್ಷ್ಯ: ಆರೋಗ್ಯಾಧಿಕಾರಿಗೆ ನೋಟಿಸ್ ಜಾರಿ ಮಾಡಿದ ಡಿಸಿ - Yadgiri DC Koorma rao issued

ಯಾದಗಿರಿ ತಾಲೂಕಿನಲ್ಲಿ ಕೊರೊನಾ ರೋಗಿಯ ಅಂತ್ಯಕ್ರಿಯೆಯನ್ನು ಅಮಾನವೀಯವಾಗಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಎಂ. ಕೂರ್ಮರಾವ್ ಆರೋಗ್ಯಾಧಿಕಾರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

Koormarao
Koormarao

By

Published : Jul 2, 2020, 7:30 PM IST

ಯಾದಗಿರಿ:ತಾಲೂಕಿನ ಹೊನಗೇರಾ ಗ್ರಾಮದಲ್ಲಿ ಕೊರೊನಾ ರೋಗಿಯ ಅಂತ್ಯಕ್ರಿಯೆಯನ್ನು ಅಮಾನವೀಯವಾಗಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಎಂ. ಕೂರ್ಮರಾವ್ ಆರೋಗ್ಯಾಧಿಕಾರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ತಾಲೂಕಾ ಆರೋಗ್ಯಾಧಿಕಾರಿ ಹಾಗೂ ಮೃತದೇಹ ನಿರ್ವಹಣೆಯ ತಂಡದ ಕಾರ್ಯದರ್ಶಿ ಡಾ. ಹನುಮಂತರೆಡ್ಡಿ, ಸಹ ಕಾರ್ಯದರ್ಶಿ ಡಾ. ಪ್ರವೀಣ್ ಗೆ ನೋಟಿಸ್ ಜಾರಿ ಮಾಡಲಾಗಿದೆ.

ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಅಮಾನವೀಯವಾಗಿ ನಡೆಸಿದ್ದರ ಕುರಿತಂತೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ.

ಡಿಸಿ ನೋಟಿಸ್

ಕೋವಿಡ್ ವ್ಯಕ್ತಿಯ ಶವಸಂಸ್ಕಾರ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರಿದ್ದ ಕುರಿತು ನೀಡಿರುವ ನೋಟಿಸ್ ಗೆ 24 ಗಂಟೆಗಳ ಒಳಗೆ ಲಿಖಿತವಾಗಿ ಉತ್ತರಿಸಬೇಕು. ಒಂದು ವೇಳೆ ಉತ್ತರ ನೀಡದಿದ್ದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಜರುಗಿಸಲಾವುದೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ABOUT THE AUTHOR

...view details