ಕರ್ನಾಟಕ

karnataka

ETV Bharat / state

ಯಾದಗಿರಿ ಜಿಲ್ಲೆಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ - Yadgiri latest news

ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಕಂದಕೂರು ಪ್ರಾಥಮಿಕ ಆರೊಗ್ಯ ಕೇಂದ್ರ ಹಾಗೂ ಗುರುಮಠಕಲ್ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

yadgiri-district-commissinor-visits-health-centers
ಜಿಲ್ಲೆಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ

By

Published : Jun 16, 2020, 4:28 AM IST

ಯಾದಗಿರಿ:ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಗೆ ಬರುವ ರೋಗಿಗಳು ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮಾಡುವಂತೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಸೂಚಿಸಿದ್ದಾರೆ.

ಜಿಲ್ಲೆಯ ಕಂದಕೂರು ಪ್ರಾಥಮಿಕ ಆರೊಗ್ಯ ಕೇಂದ್ರ ಹಾಗೂ ಗುರುಮಠಕಲ್ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಡಿಸಿ, ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗೆ ಅವಶ್ಯವಿರುವ ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಕೊರತೆಯಾಗದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.

ಒಂದು ವೇಳೆ ಬೇಡಿಕೆಯಿದ್ದರೆ ತಕ್ಷಣವೇ ಮೇಲಾಧಿಕಾರಿಗಳ ಗಮನಕ್ಕೆ ತರತಕ್ಕದ್ದು. ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಕಾಪಾಡಲು ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರರಾದ ಚನ್ನಮಲ್ಲಪ್ಪ ಘಂಟಿ, ಸಂಗಮೇಶ ಜಿಡಗೆ, ತಾಲ್ಲೂಕು ವೈದ್ಯಾಧಿಕಾರಿ ಡಾ.ಹಣಮಂತರೆಡ್ಡಿ ಅವರು ಉಪಸ್ಥಿತರಿದ್ದರು.

ABOUT THE AUTHOR

...view details