ಕರ್ನಾಟಕ

karnataka

ETV Bharat / state

ಯಾದಗಿರಿ ಜಿಲ್ಲಾ ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿದೆ ಉದ್ಯೋಗ

ಕೇಂದ್ರ ಪೋಷಣ್​ ಅಭಿಯಾನ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳ ಭರ್ತಿ ನಡೆಯಲಿದೆ.

yadgiri wcd invited application for two post under poshan scheme
yadgiri wcd invited application for two post under poshan scheme

By ETV Bharat Karnataka Team

Published : Sep 25, 2023, 12:35 PM IST

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಪೋಷಣ್​ ಅಭಿಯಾನ ಯೋಜನೆ ಅಡಿಯಲ್ಲಿ ನೇಮಕಾತಿ ನಡೆಯಲಿದೆ. ಈ ಹುದ್ದೆಗಳ ನೇಮಕಾತಿ ತಾತ್ಕಾಲಿಕವಾಗಿದ್ದು, 11 ತಿಂಗಳ ಅವಧಿಗೆ ನೇಮಕಾತಿ ನಡೆಯುತ್ತದೆ. ಅಭ್ಯರ್ಥಿಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ಈ ಹುದ್ದೆ ನಿರ್ವಹಣೆ ಮುಂದುವರೆಯಲಿದೆ.

ಅಧಿಸೂಚನೆ

ಹುದ್ದೆಗಳ ವಿವರ: ಜಿಲ್ಲಾ ಪ್ರಾಜೆಕ್ಟ್​​ ಅಸಿಸ್ಟೆಂಟ್​ ಮತ್ತು ಬ್ಲಾಕ್​ ಕೊಆರ್ಡಿನೇಟರ್​- ತಲಾ ಒಂದೊಂದು ಹುದ್ದೆಗಳು.

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಷ್​ ಭಾಷಾ ಜ್ಞಾನ ಹೊಂದಿರಬೇಕು. ಸ್ಥಳೀಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಅನುಭವ: 3 ವರ್ಷಗಳ ಕಾಲ ಸರ್ಕಾರದ ಅಥವಾ ಸಾಮಾಜಿಕ ಕಾರ್ಯಕ್ರಮದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ವಯೋಮಿತಿ: ಕನಿಷ್ಟ 21 ವರ್ಷದಿಂದ ಗರಿಷ್ಠ 45 ವರ್ಷ ವಯೋಮಿತಿ.

ಆಯ್ಕೆ: ಕಂಪ್ಯೂಟರ್​ ಜ್ಞಾನ ಪರೀಕ್ಷೆ ಮತ್ತು ಸಂದರ್ಶನ.

ವೇತನ: ಜಿಲ್ಲಾ ಪ್ರಾಜೆಕ್ಟ್​ ಅಸಿಸ್ಟೆಂಟ್​ ಹುದ್ದೆಗೆ ಮಾಸಿಕ 18,000, ಬ್ಲಾಕ್​ ಕೋ ಆರ್ಡಿನೇಟರ್​ ಹುದ್ದೆಗೆ 20,000 ಮಾಸಿಕ ವೇತನ ನಿಗದಿಸಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಅಥವಾ ಜಿಲ್ಲಾಡಳಿತದ ಅಧಿಕೃತ ವೆಬ್​ಸೈಟ್​ ಅಲ್ಲಿ ಸಿಗುವ ನಿಗದಿತ ಅರ್ಜಿ ನಮೂನೆ ಪಡೆದು ಕೆಳಕಂಡ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ:ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ ಕೋಣೆ ಸಂಖ್ಯೆ ಸಿ-17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪೂರ ರಸ್ತೆ, ಯಾದಗಿರಿ-585202

ಅಭ್ಯರ್ಥಿಗಳು ಸೆಪ್ಟೆಂಬರ್​​ 27 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 7. ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು yadgir.nic.inಭೇಟಿ ನೀಡಬಹುದು.

ಇದನ್ನೂ ಓದಿ: Job Alert: ಕಲಬುರಗಿ ಗ್ರಾಮ ಪಂಚಾಯತ್​ ನೇಮಕಾತಿ... ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

ABOUT THE AUTHOR

...view details