ಕರ್ನಾಟಕ

karnataka

ETV Bharat / state

ವಿದ್ಯಾರ್ಥಿಗಳಿಗೆ ಬುಕ್​-ಪೆನ್​ ವಿತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯಾದಗಿರಿ ಯುವಕ! - Young man celebrating his birthday at Yadagari school

ಬೆಳಗೇರಾ ಗ್ರಾಮದ ಯುವಕ ಆಂಜನೇಯ ನಾಯ್ಕೋಡಿ, ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮತ್ತು ಶಿಕ್ಷಕರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಈ ವೇಳೆ ಶಾಲೆಯ 48 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ನೋಟ್ ಬುಕ್ ಮತ್ತು ಪೆನ್​ ವಿತರಿಸಿದ್ದಾನೆ. ಈ ಮೂಲಕ  ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸುವ ಹೊಸ ಪ್ರಯತ್ನ ಮಾಡಿದ್ದಾನೆ.

Young man celebrating his birthday at Yadagari school
ಪೆನ್ನು, ಪುಸ್ತಕ ವಿತರಿಸಿ ಹುಟ್ಟುಹಬ್ಬ ಆಚರಣೆ

By

Published : Dec 8, 2019, 10:15 AM IST

ಯಾದಗಿರಿ: ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯ ಗುರಮಿಠಕಲ್ ತಾಲೂಕು ಬೆಳಗೇರಾ ಗ್ರಾಮದ ಯುವಕನೋರ್ವ ವಿನೂತನವಾಗಿ ಜನ್ಮದಿನ ಆಚರಿಸಿಕೊಂಡಿದ್ದಾನೆ.

ಪೆನ್ನು, ಪುಸ್ತಕ ವಿತರಿಸಿ ಹುಟ್ಟುಹಬ್ಬ ಆಚರಣೆ

ಬೆಳಗೇರಾ ಗ್ರಾಮದ ಯುವಕ ಆಂಜನೇಯ ನಾಯ್ಕೋಡಿ, ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಮತ್ತು ಶಿಕ್ಷಕರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಈ ವೇಳೆ ಶಾಲೆಯ 48 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ನೋಟ್ ಬುಕ್ ಮತ್ತು ಪೆನ್​ ವಿತರಿಸಿದ್ದಾನೆ. ಈ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸುವ ಹೊಸ ಪ್ರಯತ್ನ ಮಾಡಿದ್ದಾನೆ.

ಕಾರ್ಯಕ್ರಮದಲ್ಲಿ ಬೆಳಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ, ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ, ಶಿಕ್ಷಕ ವೆಂಕಟೇಶ್​ ಸೇರಿದಂತೆ ಗ್ರಾಮದ ಯುವಕರು, ಮುಖಂಡರು ಇದ್ದರು.

For All Latest Updates

TAGGED:

ABOUT THE AUTHOR

...view details