ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಯಕ್ಷಿಂತಿ ಗ್ರಾಮದ ಯುವಕನಿಗೆ ಮನೆಯಲ್ಲಿ ಹಾವು ಕಚ್ಚಿದ ಪರಿಣಾಮ ಮೃತಪಟ್ಟಿದ್ದಾನೆ. ಮಲ್ಲಿಕಾರ್ಜುನ ಇಟಗಿ (21) ಮೃತ ಯುವಕ.
ಯಾದಗಿರಿ : ಮನೆಯಲ್ಲಿ ಹಾವು ಕಚ್ಚಿ ಯುವಕ ಸಾವು - ಯಾದಗಿರಿಯಲ್ಲಿ ಮನೆಯಲ್ಲಿ ಹಾವು ಕಚ್ಚಿ ಯುವಕ ಸಾವು
ಮನೆಯಲ್ಲಿ ಕೆಲಸ ಮಾಡುವ ವೇಳೆ ಯುವಕನಿಗೆ ಹಾವು ಕಚ್ಚಿದ್ದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಯಕ್ಷಿಂತಿ ಗ್ರಾಮದಲ್ಲಿ ನಡೆದಿದೆ.
ಹಾವು ಕಚ್ಚಿ ಯುವಕ ಸಾವು
ಭಾನುವಾರ ಸಂಜೆ ಮನೆಯಲ್ಲಿ ಕೆಲಸ ಮಾಡುವ ವೇಳೆ ಯುವಕನಿಗೆ ಹಾವು ಕಚ್ಚಿದ್ದು, ತಕ್ಷಣ ಚಿಕಿತ್ಸೆಗಾಗಿ ಶಹಾಪುರದ ಸ್ಪಂದನಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾನೆ. ಈ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.