ರಕ್ತಹೀನತೆ ಒಂದು ಸಾಮಾನ್ಯ ಸಮಸ್ಯೆಯಾಗಿದೆ. ವಿಶೇಷವಾಗಿ ಮಕ್ಕಳು ಮತ್ತು ಮಹಿಳೆಯರು ಈ ಸಮಸ್ಯೆಯನ್ನು ಹೆಚ್ಚಾಗಿ ಎದುರಿಸುತ್ತಿರುತ್ತಾರೆ. ನಮ್ಮ ದೇಶದಲ್ಲಿ 6 ತಿಂಗಳಿಂದ 6 ವರ್ಷ ವಯಸ್ಸಿನ ಶೇ 67 ರಷ್ಟು ಮಕ್ಕಳು ಮತ್ತು ಶೇ 57 ರಷ್ಟು ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಇದಕ್ಕೆ ಮುಖ್ಯ ಕಾರಣವೆಂದರೆ ದೇಹದಲ್ಲಿ ಕೆಂಪು ರಕ್ತ ಕಣಗಳ ಅಸಮರ್ಪಕ ಉತ್ಪಾದನೆ ಮತ್ತು ದೇಹದಲ್ಲಿನ ರಕ್ತದ ನಷ್ಟವೂ ಇದಕ್ಕೆ ಕಾರಣವಾಗಬಹುದು. ಜೊತೆಗೆ ದೇಹದಲ್ಲಿ ಕಬ್ಬಿಣಾಂಶದ ಕೊರತೆಯು ಅನೇಕ ಜನರಲ್ಲಿ ರಕ್ತಹೀನತೆಗೆ ಪ್ರಾಮುಖ ಕಾರಣವಾಗುತ್ತದೆ.
ನಮ್ಮ ದೇಹದಲ್ಲಿ ಕಬ್ಬಿಣಾಂಶದ ಕೊರತೆಯಿದ್ದರೆ, ಕೆಂಪು ರಕ್ತ ಕಣಗಳು ಸಾಕಷ್ಟು ಸಂಖ್ಯೆಯಲ್ಲಿ ಉತ್ಪತ್ತಿಯಾಗುವುದಿಲ್ಲ. ಇದರಿಂದ ದಣಿವು ಮತ್ತು ಆಯಾಸದಂತಹ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ದೇಹದಲ್ಲಿ ಕಬ್ಬಿಣಾಂಶವನ್ನು ಹೆಚ್ಚಿಸಿಕೊಳ್ಳಲು ನೆನೆಸಿದ ಒಣದ್ರಾಕ್ಷಿ ಸೇವನೆ ಮಾಡುವುದು ಉತ್ತಮವಾದ ಮಾರ್ಗವಾಗಿದೆ. ಒಣದ್ರಾಕ್ಷಿಯು ಕಬ್ಬಿಣಾಂಶದ ಜೊತೆಗೆ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ನಿತ್ಯ 10 ರಿಂದ 15 ಒಣದ್ರಾಕ್ಷಿಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಗ್ಗೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜವನ್ನು ನೀಡುತ್ತದೆ. ಇದು ಕಬ್ಬಿಣಾಂಶದ ಕೊರತೆಯನ್ನು ನಿಗಿಸುತ್ತದೆ. ಪರಿಣಾಮವಾಗಿ ದೇಹದಲ್ಲಿ ರಕ್ತಹೀನತೆಯನ್ನು ಕಡಿಮೆಯಾಗುತ್ತದೆ.
ನೆನೆಸಿದ ಒಣದ್ರಾಕ್ಷಿ ತಿನ್ನುವುದರಿಂದ ಆಗುವ ಪ್ರಯೋಜನಗಳು:ಒಣದ್ರಾಕ್ಷಿ ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದು ಕಬ್ಬಿಣದ ಜೊತೆಗೆ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವುದರಿಂದ ಇವು ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ. ಕಪ್ಪು ಒಣದ್ರಾಕ್ಷಿಯಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ ಮತ್ತು ಕ್ಯಾಲ್ಸಿಯಂ ಅನ್ನು ಹೊಂದಿದ್ದು ಇವು ಮೂಳೆಯ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.