ಚಳಿಗಾಲದಲ್ಲಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಬರಬಹುದು ಎಂದುಕೊಂಡರೆ ಅದು ನಮ್ಮ ತಪ್ಪು ಕಲ್ಪನೆಯಾಗಿದೆ. ಈ ಚಳಿಗಾಲದಲ್ಲಿ ಮಾರಣಾಂತಿಕ ಹೃದಯದ ಸಮಸ್ಯೆಗಳು ಉಲ್ಬಣಗೊಳ್ಳಲಿವೆ ಎಂದು ವೈದ್ಯರು ಎಚ್ಚರಿಸಿದ್ದಾರೆ.
ಸಡನ್ ಆಗಿ ಕುಸಿಯುತ್ತಿರುವ ಜಾಗತಿಕ ತಾಪಮಾನ ಮತ್ತು ಹೃದ್ರೋಗದ ನಡುವೆ ಸಂಬಂಧವಿದೆ ಎಂದು ಸ್ವೀಡನ್‌ನ ಲಂಡನ್ ವಿಶ್ವವಿದ್ಯಾಲಯದ ಸಂಶೋಧಕರು ಇತ್ತೀಚೆಗೆ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ತಾಪಮಾನವು ಶೂನ್ಯ ಡಿಗ್ರಿಗಿಂತ ಕಡಿಮೆಯಾದಾಗ, ವಿಶೇಷವಾಗಿ ಚಳಿಗಾಲದಲ್ಲಿ ಹೃದಯ ಸಮಸ್ಯೆ ಉಲ್ಬಣಗೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.
ತಾಪಮಾನವು ಶೂನ್ಯಕ್ಕಿಂತ ಕಡಿಮೆಯಾದಾಗ, ಹೃದಯಾಘಾತದ ಅಪಾಯವು ಒಂದೇ ದಿನದಲ್ಲಿ ನಾಲ್ಕು ಪಟ್ಟು ಹೆಚ್ಚಾಗುತ್ತದೆ ಎಂದಿದ್ದಾರೆ.
ಇದನ್ನೂ ಓದಿ:ಲಸ್ಸಾ ಜ್ವರ ನಿಜಕ್ಕೂ ಗಂಭೀರವೇ?.. ಇದರ ಲಕ್ಷಣಗಳೇನು ಗೊತ್ತೇ?
ಕಡಿಮೆ ಬಿಸಿಲು, ತಣ್ಣನೆಯ ಗಾಳಿ ಬೀಸುವುದರಿಂದ ರಕ್ತನಾಳಗಳು ಶೀತಕ್ಕೆ ಸ್ಪಂದಿಸುತ್ತವೆ. ಇದರಿಂದ ರಕ್ತನಾಳಗಳಲ್ಲಿ ರಕ್ತದೊತ್ತಡ ಹೆಚ್ಚುತ್ತದೆ. ತೀವ್ರ ನಡುಕ ಉಂಟಾದಾಗ ಹೃದಯಾಘಾತವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹಾಗಾಗಿ ಈ ಚಳಿಗಾಲದಲ್ಲಿ ಹೃದಯದ ಸಮಸ್ಯೆ ಇರುವವರು ನೇರವಾಗಿ ಚಳಿಗೆ ಹೋಗದೆ ಸ್ವಲ್ಪ ಬೆಚ್ಚನೆಯ ವಾತಾವರಣದಲ್ಲಿ ಇರಲು ಪ್ರಯತ್ನಿಸುವುದು ಉತ್ತಮ.