'ಬುಲ್ಡೋಜರ್ ಬಾಬಾ ಜಿಂದಾಬಾದ್'.. ಯುಪಿಯಲ್ಲಿ ಬಿಜೆಪಿ ವಿಭಿನ್ನ ಸಂಭ್ರಮಾಚರಣೆ! - ಪಂಚರಾಜ್ಯಗಳ ಚುನಾವಣೆ
ಲಖನೌ: ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಾರ್ಟಿ ಮತ್ತೊಂದು ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಅತಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಸಂಭ್ರಮ ಜೋರಾಗಿದೆ. ಈ ಮಧ್ಯೆ ಲಖನೌನಲ್ಲಿ ಬುಲ್ಡೋಜರ್ನಲ್ಲಿ ನಿಂತು ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆ ಸಿಎಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಅಖಿಲೇಶ್ ಯಾದವ್ ಸಿಎಂ ಅವರನ್ನು ಬುಲ್ಡೋಜರ್ ಬಾಬಾ ಎಂದು ಕರೆದಿದ್ದರು. ಇದೇ ಹೇಳಿಕೆಯನ್ನು ಇಟ್ಟುಕೊಂಡು ಕಮಲ ಕಾರ್ಯಕರ್ತರು ಬುಲ್ಡೋಜರ್ ಬಾಬಾ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.
Last Updated : Feb 3, 2023, 8:19 PM IST