ಟಿಎಂಸಿ ಕಚೇರಿಯಲ್ಲಿ ಸ್ಫೋಟ... ಮೂವರಿಗೆ ಗಾಯ! - ತೃಣಮೂಲ ಕಾಂಗ್ರೆಸ್ ಕಚೇರಿಯಲ್ಲಿ ಸ್ಫೋಟ
ಕೋಲ್ಕತ್ತಾ: ಚುನಾವಣೆ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬಂಕುರ ಜಿಲ್ಲೆಯ ಜಾಯ್ಪುರ್ ಪ್ರದೇಶದಲ್ಲಿನ ತೃಣಮೂಲ ಕಾಂಗ್ರೆಸ್ ಕಚೇರಿಯಲ್ಲಿ ಸ್ಫೋಟವಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಮೊದಲ ಹಂತದ ಮತದಾನ ನಡೆಯುವುದಕ್ಕೂ ಒಂದು ದಿನ ಮುಂಚಿತವಾಗಿ ಈ ಸ್ಫೋಟ ಸಂಭವಿಸಿದ್ದು, ಇದರ ಹಿಂದೆ ಎಡಪಂಥೀಯರ ಕೈವಾಡವಿದೆ ಎಂದು ಟಿಎಂಸಿ ಕಾರ್ಯಕರ್ತರು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಟಿಎಂಸಿ ಪಕ್ಷದ ಕಾರ್ಯಕರ್ತರು ಕಚೇರಿಯೊಳಗೆ ಬಾಂಬ್ ತಯಾರಿಸುತ್ತಿದ್ದರು ಎಂದು ಹೇಳಿದೆ. ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.