ಬೀಗ ಹಾಕಿದ್ದ ಮನೆಯಲ್ಲಿ ನಾಲ್ವರ ಮೃತದೇಹ ಪತ್ತೆ: ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ! - ನಾಲ್ವರು ಸಾವು
ಪ್ರಯಾಗ್ರಾಜ್: ಹೊರಗಡೆಯಿಂದ ಬಿಗ ಹಾಕಿದ್ದ ಮನೆಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಅಥವಾ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ಈ ಘಟನೆ ನಡೆದಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ, ಪ್ರಕರಣದ ಸಂಬಂಧ ದೂರು ಸಹ ದಾಖಲಿಸಿಕೊಂಡಿದ್ದಾರೆ.