ನಿಜವಾದ ರೈತ ಎಂದಿಗೂ ಟ್ರ್ಯಾಕ್ಟರ್ ಸುಟ್ಟು ಹಾಕಲ್ಲ: ರೈತ ಮಸೂದೆ ಬಗ್ಗೆ ತೇಜಸ್ವಿ ಸೂರ್ಯ ಮಾತು! - ರೈತ ಮಸೂದೆ ಬಗ್ಗೆ ತೇಜಸ್ವಿ ಸೂರ್ಯ ಮಾತು
ನವದೆಹಲಿ: ನಿಜವಾದ ರೈತ ಎಂದಿಗೂ ಟ್ರ್ಯಾಕ್ಟರ್ ಅಥವಾ ಕೃಷಿಗೆ ಬಳಸುವ ಯಾವುದೇ ವಸ್ತು ಸುಡುವುದಿಲ್ಲ. ಯುವ ಕಾಂಗ್ರೆಸ್ ಕಾರ್ಯಕರ್ತರು ಈ ರೀತಿಯ ಹಿಂಸಾತ್ಮಕ ಕೃತ್ಯಗಳ ಮೂಲಕ ರೈತರಿಗೆ ಅವಮಾನ ಮಾಡ್ತಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ. ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಸುಟ್ಟು ಹಾಕಿರುವ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರ ಅಂಗೀಕರಿಸಿರುವ ಕೃಷಿ ಮಸೂದೆಗಳು ರೈತರ ಕಲ್ಯಾಣಕ್ಕಾಗಿ ಎಂದು ಅವರಿಗೆ ತಿಳಿದಿವೆ. ಈ ಮಸೂದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ಕಾಂಗ್ರೆಸ್ ಈ ಹಿಂದೆ ತನ್ನ ಪ್ರಣಾಳಿಕೆಯಲ್ಲಿ ಹಾಕಿಕೊಂಡು ಜಾರಿ ತರುವ ಭರವಸೆ ನೀಡಿತ್ತು. ಆದರೆ, ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಇವುಗಳನ್ನ ಜಾರಿಗೊಳಿಸುತ್ತಿದ್ದಂತೆ ಕಾಂಗ್ರೆಸ್ ಯು - ಟರ್ನ್ ತೆಗೆದುಕೊಳ್ಳುತ್ತಿದ್ದೆ ಎಂದಿದ್ದಾರೆ.