ಕೊರೊನಾ ಗೆದ್ದ ಆರು ತಿಂಗಳ ಮಗು... ಚಪ್ಪಾಳೆ ತಟ್ಟಿ ಸ್ವಾಗತಿಸಿದ ಜನರು! - ಕೊರೊನಾ ವೈರಸ್
ಥಾಣೆ: ಮಹಾರಾಷ್ಟ್ರದಲ್ಲಿ ಕೊರೊನಾ ಆರ್ಭಟಕ್ಕೆ ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ. ಈಗಾಗಲೇ 1700ಕ್ಕೂ ಹೆಚ್ಚು ಜನರು ಸೋಂಕಿನಿಂದ ಬಳಲುತ್ತಿದ್ದು, 70ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಇದರ ಮಧ್ಯೆ ಆರು ತಿಂಗಳ ಮಗುವೊಂದು ಕೊರೊನಾ ಗೆದ್ದು ಮನೆಗೆ ಬಂದಿದೆ. ಮಹಾರಾಷ್ಟ್ರದ ಥಾಣೆಯಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಆರು ತಿಂಗಳ ಮಗು ಸಂಪೂರ್ಣವಾಗಿ ಗುಣಮುಖವಾಗಿ ಮನೆಗೆ ಬಂದಿದ್ದು, ಈ ವೇಳೆ ಅಪಾರ್ಟ್ಮೆಂಟ್ ಜನರು ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರ,ಕರ್ಪೋರೇಟರ್, ಪೊಲೀಸರು, ವೈದ್ಯರು ಹಾಗೂ ಆ್ಯಂಬುಲೆನ್ಸ್ ಚಾಲಕರಿಗೆ ಧನ್ಯವಾದ ಹೇಳಿದ್ದಾರೆ.