ನಡು ರೋಡ್ನಲ್ಲೇ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ! - ಎಲ್ಪಿಜಿ ಸಿಲಿಂಡರ್
ಥಾಣೆ: ಎಲ್ಪಿಜಿ ಗ್ಯಾಸ್ ಹೊತ್ತೊಯ್ಯುತ್ತಿದ್ದ ಟ್ರಕ್ವೊಂದು ನಡು ರೋಡ್ನಲ್ಲಿ ಉರುಳಿ ಬಿದ್ದಿರುವ ಘಟನೆ ಮಹಾರಾಷ್ಟ್ರದ ಠಾಣೆಯ ಘೋಡ್‌ಬಂದರ್ ರಸ್ತೆಯಲ್ಲಿ ನಡೆದಿದೆ. ಘಟನೆಯಿಂದ ಟ್ರಕ್ ಡ್ರೈವರ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಯಾವುದೇ ಗ್ಯಾಸ್ ಲೀಕ್ ಆಗದ ಕಾರಣ ದುರಂತವೊಂದು ತಪ್ಪಿದೆ.