ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಮೂವರು ದುರ್ಮರಣ - ಖೇಡಾ ರಾಷ್ಟ್ರೀಯ ಹೆದ್ದಾರಿ ಅಪಘಾತ
ಗುಜರಾತ್: ಖೇಡಾ ರಾಷ್ಟ್ರೀಯ ಹೆದ್ದಾರಿ-8 ರ ಭೂಮೆಲ್ ರೈಲ್ವೆ ಸೇತುವೆ ಬಳಿ ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೃತಪಟ್ಟಿದ್ದಾಳೆ. ಮೃತಪಟ್ಟ ಮೂವರು ನಾಡಿಯಾಡ್‌ನ ಕಂಜಾರಿ ಗ್ರಾಮದವರು ಎಂದು ತಿಳಿದುಬಂದಿದೆ.