ಪುಣೆ-ಬೆಂಗಳೂರು ಹೈವೆಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಆರು ಜನರ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿಯಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಸತಾರಾ ಬಳಿ ಟ್ರಕ್ ಹಿಂಬದಿಗೆ ಗುದ್ದಿದೆ. ಪರಿಣಾಮ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ ಆರು ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.