ಲ್ಯಾಂಡಿಂಗ್ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಿಮಾನ... 64 ಪ್ರಯಾಣಿಕರು ಸುರಕ್ಷಿತ! - ಏರ್ ಇಂಡಿಯಾ ವಿಮಾನ ಅಪಘಾತ
ವಿಜಯವಾಡ(ಆಂಧ್ರಪ್ರದೇಶ): 64 ಪ್ರಯಾಣಿಕರ ಹೊತ್ತು ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ವಿಮಾನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಅವಘಡ ಸಂಭವಿಸಿದ್ದು, ಎಲ್ಲ 64 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಏರ್ ಇಂಡಿಯಾ ವಿಮಾನ ಕೆಳಗೆ ಇಳಿಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಜಿ. ಮಧುಸೂದನ್ ರಾವ್ ತಿಳಿಸಿದ್ದು, ತನಿಖೆಗೆ ಆದೇಶ ನೀಡಲಾಗಿದೆ ಎಂದಿದ್ದಾರೆ.