ರೋಹ್ಟಾಂಗ್ ಪಾಸ್ನಲ್ಲಿ ಭಾರಿ ಹಿಮಪಾತ : ಜಿಲ್ಲಾಡಳಿತದಿಂದ ಪ್ರವಾಸಿಗರಿಗೆ ಮುನ್ನೆಚ್ಚರಿಕೆ - ಹಿಮಾಚಲ ಪ್ರದೇಶದಲ್ಲಿ ಹಿಮಪಾತ
ಕುಲ್ಲು (ಹಿಮಾಚಲ ಪ್ರದೇಶ) : ಕಡಿದಾದ ಪರ್ವತಗಳು ಮತ್ತು ಗುಡ್ಡಗಾಡು ಪ್ರದೇಶದಿಂದ ಕೂಡಿರುವ ಹಿಮಾಚಲ ಪ್ರದೇಶದ ರೋಹ್ಟಾಂಗ್ ಪಾಸ್ನಲ್ಲಿ ಭಾರಿ ಪ್ರಮಾಣದಲ್ಲಿ ಹಿಮಪಾತವಾಗಿದೆ. ಇದರಿಂದ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಪರ್ವತ ಪ್ರದೇಶಗಳಿಗೆ ತೆರಳದಂತೆ ಪ್ರವಾಸಿಗರಿಗೆ ಕುಲ್ಲು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಉದ್ಘಾಟನೆಗೊಂಡ ಅಟಲ್ ಟನೆಲ್ ( ಸುರಂಗ) ಈ ಪ್ರದೇಶದ ಆಕರ್ಷಣೆಗಳಲ್ಲಿ ಒಂದಾಗಿದೆ.