ಹುತಾತ್ಮ ಭದ್ರತಾ ಸಿಬ್ಬಂದಿಯ ಪಾರ್ಥಿವ ಶರೀರಕ್ಕೆ ಅಮಿತ್ ಶಾ ನಮನ - ಭೂಪೇಶ್ ಬಾಗೇಲ್
ಬಸ್ತಾರ್ (ಛತ್ತೀಸ್ಗಢ): ಕೇಂದ್ರ ಗೃಹ ಸಚಿವ ಅಮಿತ್ ಶಾ ಛತ್ತೀಸ್ಗಢಕ್ಕೆ ಭೇಟಿ ನೀಡಿದ್ದು, ನಕ್ಸಲರ ವಿರುದ್ಧ ಹೋರಾಡಿ ಮಡಿದ ಭದ್ರತಾ ಸಿಬ್ಬಂದಿಯ ಪಾರ್ಥಿವ ಶರೀರಗಳಿಗೆ ನಮಿಸಿದ್ದಾರೆ. ಬಸ್ತಾರ್ ಜಿಲ್ಲೆಯ ಜಗದಲ್ಪುರದಲ್ಲಿ 14 ಮಂದಿ ಹುತಾತ್ಮರ ಪಾರ್ಥಿವ ಶರೀರಗಳನ್ನು ಇರಿಸಲಾಗಿದ್ದು, ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಕೂಡ ಇದೇ ವೇಳೆ ಮಾಲಾರ್ಪಣೆ ಮಾಡಿ ಅಂತಿಮ ನಮನ ಸಲ್ಲಿಸಿದರು.