ನಂದಿಗ್ರಾಮದಲ್ಲಿ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ: ವಿಡಿಯೋ - ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಫೈಟ್
ನಂದಿಗ್ರಾಮ(ಪಶ್ಚಿಮ ಬಂಗಾಳ): ಇಲ್ಲಿನ ನಂದಿಗ್ರಾಮ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿರುವ ಘಟನೆ ನಡೆದಿದೆ. ಏಪ್ರಿಲ್ 1ರಂದು ನಂದಿಗ್ರಾಮ ಸೇರಿದಂತೆ 29 ವಿಧಾನಸಭೆ ಕ್ಷೇತ್ರಗಳಲ್ಲಿ 2ನೇ ಹಂತದ ಮತದಾನ ನಡೆಯಲಿದೆ. ಅದಕ್ಕಾಗಿ ಇಂದು ಕೊನೆಯ ದಿನದ ಪ್ರಚಾರ ನಡೆಸಲಾಯಿತು. ಈ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿಯಿಂದ ಸುವೇಂದು ಅಧಿಕಾರಿ ಸ್ಪರ್ಧಿಸುತ್ತಿದ್ದಾರೆ.