70 ವರ್ಷಗಳ ಕಾಲ ಭ್ರಷ್ಟಾಚಾರದೊಂದಿಗೆ ಕಾಂಗ್ರೆಸ್ ಆಡಳಿತ: ತೇಜಸ್ವಿ ಸೂರ್ಯ ವಾಗ್ದಾಳಿ - ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ವಾಗ್ದಾಳಿ
ಬಜೆಟ್ ಅಧಿವೇಶನದಲ್ಲಿ ಭಾಗಿಯಾಗಿ ಮಾತನಾಡಿರುವ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ವಿರುದ್ಧ ನೇರ ವಾಗ್ದಾಳಿ ನಡೆಸಿದರು. ಕಳೆದ 70 ವರ್ಷಗಳ ಕಾಲ ಅಧಿಕಾರ ನಡೆಸಿರುವ ನೀವೂ, ಕೇವಲ ಭ್ರಷ್ಟಾಚಾರದೊಂದಿಗೆ ಆಡಳಿತ ನಡೆಸಿದ್ದೀರಿ. ನಿಮ್ಮ ಕಾಲದಲ್ಲಿ ಸಾಮಾನ್ಯ ಜನರು ಬ್ಯಾಂಕ್ಗಳಲ್ಲಿ ಅಕೌಂಟ್ ಓಪನ್ ಮಾಡಲು ತೊಂದರೆ ಪಡುವಂತಾಗಿತ್ತು. ಆದರೆ, ಇದೀಗ ಜನ್ ಧನ್ ಖಾತೆಯಿಂದ ದೇಶದ ಪ್ರತಿಯೊಬ್ಬರು ಬ್ಯಾಂಕ್ಗಳಲ್ಲಿ ಖಾತೆ ಹೊಂದಿದ್ದಾರೆ ಎಂದರು.