ಬಿಹಾರದ 16 ಜಿಲ್ಲೆಗಳಲ್ಲಿ ಭೀಕರ ಪ್ರವಾಹ: ಸಂಕಷ್ಟದಲ್ಲಿ 74 ಲಕ್ಷ ಮಂದಿ - ಬಿಹಾರದಲ್ಲಿ ಪ್ರವಾಹದಿಂದ ಸಂಕಷ್ಟ
ಪಾಟ್ನಾ: ಬಿಹಾರದಲ್ಲಿ ಭೀಕರ ಪ್ರವಾಹ ಮುಂದುವರೆದಿದ್ದು, ರಾಜ್ಯದಲ್ಲಿ ಒಟ್ಟು ಪ್ರವಾಹ ಪೀಡಿತರ ಸಂಖ್ಯೆ 74 ಲಕ್ಷಕ್ಕೆ ಏರಿಕೆಯಾಗಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಬುಲೆಟಿನ್ ತಿಳಿಸಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಹೆಚ್ಚಾಗಿದ್ದು, ಇನ್ನೂ 87,000 ಜನರು ಪ್ರವಾಹದಿಂದ ಸಂಕಷ್ಟಕ್ಕೀಡಾಗಿದ್ದಾರೆ. ಪ್ರವಾಹದಿಂದಾಗಿ 16 ಜಿಲ್ಲೆಗಳ ಪರಿಸ್ಥಿತಿ ಭೀಕರವಾಗಿದೆ. ಈವರೆಗೆ ಒಟ್ಟು 5.08 ಲಕ್ಷ ಜನರನ್ನು ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರಿಸಲಾಗಿದೆ.