ಹುಟ್ಟುಹಬ್ಬದ ದಿನವೇ ಯುವತಿಯ ಭೀಕರ ಹತ್ಯೆ... ಅತ್ಯಾಚಾರವೆಸಗಿ, ಕೊಲೆ ಮಾಡಿದ್ರಾ ಕಾಮುಕರು!?
ವಾರಂಗಲ್: ಕಳೆದ ವಾರ ಹುಟ್ಟುಹಬ್ಬದ ದಿನವೇ ಯುವತಿಯೋರ್ವಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇದು ಅನೇಕ ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಹನುಮಕೊಂಡ್ದ ಭದ್ರಕಾಳಿ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವುದಾಗಿ ಹೇಳಿದ್ದ ಯುವತಿ ರಾತ್ರಿಯಾದರೂ ಹಿಂತಿರುಗಿರಲಿಲ್ಲ. ಹೀಗಾಗಿ ಪೋಷಕರು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಎರಡು ದಿನಗಳ ಬಳಿಕ ಯುವತಿಯ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ವಾರಂಗಲ್ನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಾಥಮಿಕ ವರದಿ ಪ್ರಕಾರ ಆಕೆಯ ಮೇಲೆ ಹುಟ್ಟುಹಬ್ಬದ ದಿನವೇ ಅತ್ಯಾಚಾರವೆಸಗಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Last Updated : Nov 30, 2019, 12:03 AM IST