ನಾಮಪತ್ರ ಸಲ್ಲಿಕೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ - ಖರಗ್‌ಪುರ ಪಟ್ಟಣ ಪೊಲೀಸ್ ಠಾಣೆ
ಖರಗ್‌ಪುರ(ಪಶ್ಚಿಮ ಬಂಗಾಳ): ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ವೇಳೆ ಖರಗ್‌ಪುರ ಪಟ್ಟಣ ಪೊಲೀಸ್ ಠಾಣೆಯ ಉಪವಿಭಾಗದ ಅಧಿಕಾರಿ ರಾಜ ಮುಖರ್ಜಿ, ಮೆರವಣಿಗೆಯನ್ನು ನಿಲ್ಲಿಸಿ ಬಿಜೆಪಿ ಕಾರ್ಯಕರ್ತರನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ಅಭ್ಯರ್ಥಿ ಸ್ವಪನ್ ಭುಯಿನ್ ಎನ್ನುವರು ಖರಗ್‌ಪುರ ಉಪವಿಭಾಗ ಕಚೇರಿಗೆ ನಾಮಪತ್ರ ಸಲ್ಲಿಸಲು ಬರುತ್ತಿದ್ದ ವೇಳೆ ಗಲಾಟೆ ನಡೆದಿದೆ. ಉಪವಿಭಾಗದ ಅಧಿಕಾರಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ನಿಭಾಯಿಸಲು ಈ ಪ್ರದೇಶದಲ್ಲಿ ಪೊಲೀಸ್ ಪಡೆ ನಿಯೋಜಿಸಲಾಗಿದೆ.