ನೇತಾಜಿ, ಬಂಗಾಳಕ್ಕೆ ಬಿಜೆಪಿ ಅವಮಾನ: ಮಮತಾ ಬ್ಯಾನರ್ಜಿ ಆಕ್ರೋಶ - ಪಶ್ಚಿಮ ಬಂಗಾಳ ಸಿಎಂ ನ್ಯೂಸ್
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಇದೇ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇದರ ಬೆನ್ನಲ್ಲೇ ಬಿಜೆಪಿ ಹಾಗೂ ಟಿಎಂಸಿ ನಡುವೆ ಸ್ಲೋಗ್ನ ವಾರ್ ಆರಂಭಗೊಂಡಿದೆ. ಮೊನ್ನೆ ಆಯೋಜನೆಗೊಂಡಿದ್ದ ಸಮಾರಂಭದಲ್ಲಿ ಜೈಶ್ರೀರಾಮ್ ಎಂಬ ಘೋಷಣೆ ಕೇಳಿ ಬರುತ್ತಿದ್ದಂತೆ ಆಕ್ರೋಶಗೊಂಡ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೈ ಹಿಂದ್, ಜೈ ಬಾಂಗ್ಲಾ ಎಂದು ಘೋಷಣೆ ಕೂಗಿ ಸಭೆಯಿಂದ ಹೊರನಡೆದಿದ್ದರು. ಇದೀಗ ಅದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಎಲ್ಲರಿಗೂ ನಾಯಕರು. ಆದರೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಎದುರೇ ನನಗೆ ಬಿಜೆಪಿ ಅವಮಾನ ಮಾಡಿದೆ. ನಾನು ರಾಜಕೀಯದಲ್ಲಿ ನಂಬಿಕೆ ಇಟ್ಟಿದ್ದೇನೆ ಹೊರತಾಗಿ ಹೊಡೆದಾಟದಲ್ಲಿ ಅಲ್ಲ. ನೇತಾಜಿ ಮತ್ತು ಪಶ್ಚಿಮ ಬಂಗಾಳಕ್ಕೆ ಬಿಜೆಪಿ ಅವಮಾನ ಮಾಡಿದೆ ಎಂದು ಮಮತಾ ವಾಗ್ದಾಳಿ ನಡೆಸಿದರು.