ಜೆಎನ್ಯು ಕೃತ್ಯ ಖಂಡನೀಯ... ಅದರ ಬಗ್ಗೆ ಯೋಚಿಸುತ್ತಾ ರಾತ್ರಿಯಿಡೀ ನಿದ್ದೆ ಮಾಡಿಲ್ಲ ಎಂದ ಕಪೂರ್! - ಬಾಲಿವುಡ್ ನಟ ಅನಿಲ್ ಕಪೂರ್
ಮುಂಬೈ: ದೆಹಲಿಯ ಜೆಎನ್ಯುದಲ್ಲಿ ನಡೆದಿರುವ ವಿದ್ಯಾರ್ಥಿಗಳ ಮೇಲಿನ ಅಮಾನವೀಯ ಹಲ್ಲೆಗೆ ದೇಶಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಈಗಾಗಲೇ ಜನರು ಬೀದಿಗೆ ಇಳಿದು ಇದರ ವಿರುದ್ಧ ಪ್ರತಿಭಟನೆ ನಡೆಸ್ತಿದ್ದು, ಬಾಲಿವುಡ್ ನಟ ಅನಿಲ್ ಕಪೂರ್ ಕೂಡ ಘಟನೆ ಖಂಡಿಸಿದ್ದಾರೆ. ಜೆಎನ್ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ದುಃಖಕರ ಹಾಗೂ ಆಘಾತಕಾರಿ. ಅದರ ಬಗ್ಗೆ ಯೋಚನೆ ಮಾಡುತ್ತಾ ನನಗೆ ನಿದ್ದೆ ಮಾಡಲು ಸಾಧ್ಯವಾಗಿಲ್ಲ. ಹಿಂಸಾಚಾರದಿಂದ ಏನನ್ನೂ ಪಡೆದುಕೊಳ್ಳಲು ಸಾಧ್ಯವಿಲ್ಲ. ಕೃತ್ಯದ ಹಿಂದೆ ಇರುವವರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ.