Watch: ಕೊನೆ ಕ್ಷಣದಲ್ಲಿ ಕೈ ತಪ್ಪಿದ ಟಿಕೆಟ್: ಬಿಕ್ಕಿ ಬಿಕ್ಕಿ ಅತ್ತ ಬಿಎಸ್‌ಪಿ ಕಾರ್ಯಕರ್ತ - ಟಿಕೆಟ್ ಕೈ ತಪ್ಪಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಬಿಎಸ್‌ಪಿ ಕಾರ್ಯಕರ್ತ
ಉತ್ತರ ಪ್ರದೇಶ: ಮುಂದಿನ ತಿಂಗಳು ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸುತ್ತಿವೆ. ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಇಟ್ಟುಕೊಂಡಿದ್ದ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ಕಾರ್ಯಕರ್ತ ಅರ್ಷದ್ ರಾಣಾ ಅವರು, "ಎಲ್ಲಾ ಭರವಸೆ ನೀಡಿ ಕೊನೆ ಕ್ಷಣದಲ್ಲಿ ನನಗೆ ಟಿಕೆಟ್ ನೀಡಿಲ್ಲ. ಹೀಗಾಗುತ್ತೆ ಅಂತಾ ನಾನು ಯೋಚನೆ ಕೂಡ ಮಾಡಿರಲಿಲ್ಲ" ಎಂದು ಬಿಕ್ಕಿ ಬಿಕ್ಕಿ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.